ಕಂಪ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ತೊಗರಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮಕ್ಕೆ ಎಮ್ಮಿಗನೂರಿನ ರೈತ ಬಿ.ಸದಾಶಿವಪ್ಪ ಚಾಲನೆ ನೀಡಿದರು.
Published on:
Copied
Follow Us
ಕಂಪ್ಲಿ: ಪ್ರತಿ ಮೂರು ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡಿಸಬೇಕು. ಮಣ್ಣು ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ಗೊಬ್ಬರ ಬಳಸಬೇಕು ಎಂದು ಗಂಗಾವತಿಯ ಕೃಷಿ ಮಹಾವಿದ್ಯಾಲಯದ ಕೀಟಶಾಸ್ತ್ರ ವಿಭಾಗದ ವಿಜ್ಞಾನಿ ಡಾ.ಬದ್ರಿಪ್ರಸಾದ್ ಹೇಳಿದರು.
ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತೊಗರಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ದಲ್ಲಿ ಸೋಮವಾರ ಮಾತನಾಡಿದರು. ರಾಸಾಯನಿಕ ಗೊಬ್ಬರ ಬಳಕೆಯನ್ನು ಗಣನೀಯವಾಗಿ ಕಡಿಮೆ ಮಾಡಬೇಕು. ನಿರಂತರ ಭತ್ತ ಬೆಳೆಯುವುದರಿಂದ ಭೂಮಿಯ ಫಲವತ್ತತೆ ನಾಶವಾಗುತ್ತಿದೆ. ಬೀಜೋಪಚಾರದ ಬಳಿಕ ಬಿತ್ತನೆ ಮಾಡಬೇಕು ಎಂದು ಸಲಹೆ ನೀಡಿದರು.
ಡಿಎಟಿಸಿ ಸಹಾಯಕ ಕೃಷಿ ನಿರ್ದೇಶಕ ಎಂ.ದಯಾನಂದ ಮಾತನಾಡಿ, ತೊಗರಿ ವಾಣಿಜ್ಯ ಬೆಳೆಯಾಗಿದ್ದು ಎಲ್ಲ ಮಣ್ಣಿನಲ್ಲೂ ಬೆಳೆಯಬಹುದು. ಬೀಜ ಬಿತ್ತುವಾಗ ಜೈವಿಕ ಪೀಡೆನಾಶಕಗಳಿಂದ ಬೀಜೋಪಚಾರ ಮಾಡುವುದು ಸೂಕ್ತವಾಗಿದೆ ಎಂದರು. ತೊಗರಿ ಕೃಷಿ ಕುರಿತು ಸಮಗ್ರ ಮಾಹಿತಿ ನೀಡಿದರು.
ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ವಿಪ್ರದ ನಾರಾಯಣಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮಲ್ಲಿಕಾರ್ಜುನ, ರೈತ ಬಿ.ಸದಾಶಿವಪ್ಪ, ಸಹಾಯಕ ಕೃಷಿ ನಿರ್ದೇಶಕಿ ವಿದ್ಯಾವತಿ ಎಸ್.ಹೊಸಮನಿ, ಕೃಷಿ ಅಧಿಕಾರಿಗಳಾದ ಕೆ.ಸೋಮಶೇಖರ, ಶಿವಪ್ಪ ಬಾರಿಗಿಡದ, ನವ್ಯಾ ಪ್ರಶಾಂತ್, ಎಎಒ ಜ್ಯೋತಿ ಇತರರಿದ್ದರು.