ವೀರಶೈವ ಸಂಘದ ಅಧ್ಯಕ್ಷ ಎಸ್.ಎಂ.ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಸಂಘದಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ.ಮೂಕಯ್ಯಸ್ವಾಮಿ, ಅಕ್ಕಮಹಾದೇವಿ ಮಹಿಳಾ ಮಂಡಳಿ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಇದಕ್ಕೂ ಮುನ್ನ ಸಿಂಹಾಸನಾರೂಢ ಬಸವೇಶ್ವರ ಪುತ್ಥಳಿಯ ಮೆರವಣಿಗೆ ನಡೆಯಿತು. ವೀರಶೈವ ಸಂಘ, ವೀರಶೈವ ಸಮುದಾಯದ ಸಂಸ್ಥೆಗಳ ಪದಾಧಿಕಾರಿಗಳು, ಅಕ್ಕನ ಬಳಗದವರು ಪಾಲ್ಗೊಂಡಿದ್ದರು.