ಗರ್ಭಿಣಿಯರ ನೋಂದಣಿ ಕಡ್ಡಾಯ

ಬಳ್ಳಾರಿಯ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ  ವೈದ್ಯಾಧಿಕಾರಿಗಳ ಜಿಲ್ಲಾಮಟ್ಟದ ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿದರು. ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ವೈದ್ಯಾಧಿಕಾರಿಗಳಾದ ಡಾ.ಆರ್.ಅಬ್ದುಲ್ಲಾ, ಡಾ.ಮರಿಯಂಬಿ ವಿ.ಕೆ., ಇದ್ದರು.
ಬಳ್ಳಾರಿಯ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವೈದ್ಯಾಧಿಕಾರಿಗಳ ಜಿಲ್ಲಾಮಟ್ಟದ ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿದರು. ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ವೈದ್ಯಾಧಿಕಾರಿಗಳಾದ ಡಾ.ಆರ್.ಅಬ್ದುಲ್ಲಾ, ಡಾ.ಮರಿಯಂಬಿ ವಿ.ಕೆ., ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗರ್ಭಿಣಿ
ಬಳ್ಳಾರಿ : ಗರ್ಭಿಣಿಯರ ಆರೋಗ್ಯದ ಕುರಿತು ವಿಶೇಷ ಗಮನ ಹರಿಸುವ ಜತೆಗೆ ಮೊದಲ ಮೂರು ತಿಂಗಳಲ್ಲೇ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು.
ನಗರದ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವೈದ್ಯಾಧಿಕಾರಿಗಳ ಜಿಲ್ಲಾಮಟ್ಟದ ಸಭೆಯಲ್ಲಿ ಮಾತನಾಡಿದರು. ನಿಯಮಿತ ತಪಾಸಣೆ ಮೂಲಕ ರಕ್ತಹೀನತೆ ಪತ್ತೆ ಹಚ್ಚಿ, ಸುರಕ್ಷಿತ ಹೆರಿಗೆಗೆ ಆದ್ಯತೆ ನೀಡಬೇಕು ಎಂದರು.
ಜಿಲ್ಲೆಯ ಆರೋಗ್ಯ ಸುಧಾರಣೆ ಮತ್ತು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವೈದ್ಯಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕ್ಷಯರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಕಫ ಪರೀಕ್ಷೆ ಮಾಡಿಸುವ ಮೂಲಕ ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸಲು ಇರುವ ಏಕೈಕ ದಾರಿ ಎಂದರು.
ಡಿಎಚ್‌ಒ ಡಾ.ವೈ.ರಮೇಶಬಾಬು ಮಾತನಾಡಿ, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸುರಕ್ಷಾ ಅಧಿಕಾರಿಗಳು ಗರ್ಭಿಣಿಯರ ಮನೆಗೆ ಭೇಟಿ ನೀಡಿ ನಿರಂತರ ಸಂಪರ್ಕದಲ್ಲಿರಬೇಕು. ಆಸ್ಪತ್ರೆಗಳಲ್ಲಿನ ಟಿವಿಗಳ ಮೂಲಕ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕು. ಬೇಸಿಗೆಯ ಹಿನ್ನೆಲೆಯಲ್ಲಿ ಶಾಖಾಘಾತ ಚಿಕಿತ್ಸೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net