ಸನ್ನಡತೆಯ ಮೇಲೆ ಕೈದಿಗಳ ಬಿಡುಗಡೆ

ಬಳ್ಳಾರಿಯ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಬಿಡುಗಡೆಗೊಂಡರು. ಡಿಸಿ ನಾಗೇಂದ್ರ ಪ್ರಸಾದ್ ಕೆ., ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ, ಜೈಲು ಅಧೀಕ್ಷಕಿ ಲತಾ ಇತರರಿದ್ದರು.
ಬಳ್ಳಾರಿಯ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಬಿಡುಗಡೆಗೊಂಡರು. ಡಿಸಿ ನಾಗೇಂದ್ರ ಪ್ರಸಾದ್ ಕೆ., ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ, ಜೈಲು ಅಧೀಕ್ಷಕಿ ಲತಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಡುಗಡೆ
ಬಳ್ಳಾರಿ : ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಕೈದಿಗಳಾದ ಹಿರಿಯೂರಿನ ಎಚ್.ಕೆ.ರವಿಕುಮಾರ್, ಹಾಸನದ ಜೆ.ಎಲ್. ಮೋಹನಕುಮಾರ್, ದಾವಣಗೆರೆಯ ಮಂಜುನಾಯ್ಕ ಬಿಡುಗಡೆಗೊಂಡಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಕೇಂದ್ರ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸಿದ್ದಾರೆ. ಕೈದಿಗಳ ಸನ್ನಡತೆಯನ್ನು ಸರ್ಕಾರ ಪರಿಗಣಿಸಿದ್ದು , ಆದೇಶದ ಮೇರೆಗೆ ಬಿಡುಗಡೆಗೊಳಿಸಲಾಗಿದೆ ಎಂದು ಜೈಲು ಅಧೀಕ್ಷಕಿ ಲತಾ ತಿಳಿಸಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net