ಹಿಂಸೆ ತ್ಯಜ್ಯಿಸಿ, ಜೀವನ ನಡೆಸಿ

ಬಳ್ಳಾರಿಯ ಶ್ರೀಪಾರ್ಶ್ವನಾಥ ಭವನದಲ್ಲಿ ಆಯೋಜಿಸಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಉದ್ಘಾಟಿಸಿದರು. ಮೇಯರ್ ಪಿ.ಗಾದೆಪ್ಪ, ಎಡಿಸಿ ಮಹಮ್ಮದ್ ಎನ್.ಜುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ,  ಜೈನ್ ಸಂಘದ ಜಿಲ್ಲಾಧ್ಯಕ್ಷ ಸುರಜ್ ಮಲ್ ಜೈನ್ ಇದ್ದರು.
ಬಳ್ಳಾರಿಯ ಶ್ರೀಪಾರ್ಶ್ವನಾಥ ಭವನದಲ್ಲಿ ಆಯೋಜಿಸಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಉದ್ಘಾಟಿಸಿದರು. ಮೇಯರ್ ಪಿ.ಗಾದೆಪ್ಪ, ಎಡಿಸಿ ಮಹಮ್ಮದ್ ಎನ್.ಜುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜೈನ್ ಸಂಘದ ಜಿಲ್ಲಾಧ್ಯಕ್ಷ ಸುರಜ್ ಮಲ್ ಜೈನ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಿಂಸೆ
ಬಳ್ಳಾರಿ : ಪ್ರತಿಯೊಂದು ಜೀವಿರಾಶಿಯಲ್ಲೂ ಆತ್ಮವಿದ್ದು, ಪ್ರಾಣಿ ಅಥವಾ ಮನುಷ್ಯರಿಗೆ ಹಿಂಸೆ ನೀಡಬಾರದು ಎಂದು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ನಗರದ ಶ್ರೀಪಾರ್ಶ್ವನಾಥ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಗವಾನ್ ಮಹಾವೀರರ ತತ್ವಗಳು ಸಮಾಜಕ್ಕೆ ದಾರಿದೀಪವಾಗಿವೆ. ಬ್ರಹ್ಮಚರ್ಯ ಮೂಲಕ ಶಿಸ್ತಿನ ಜೀವನ ನಡೆಸುವುದು ಮತ್ತು ಸಂಯಮ ಪಾಲಿಸುವುದು. ಅಪರಿಗ್ರಹದಿಂದ ಭೌತಿಕ ಆಸೆಗಳನ್ನು ತ್ಯಜಿಸುವುದು ಎಂಬುದಾಗಿ ತಮ್ಮ ಪಂಚ ತತ್ವಗಳಲ್ಲಿ ತಿಳಿಸಿದ್ದಾರೆ ಎಂದರು.
ಮಹಾವೀರರ ತ್ಯಾಗ, ಅವರ ವಿಚಾರಧಾರೆಗಳು ಕೇವಲ ಓದಿಕೊಂಡವರಿಗೆ ಮಾತ್ರವಲ್ಲದೆ, ಇಡೀ ಸಮಾಜಕ್ಕೆ ತಲುಪಬೇಕು ಎಂಬ ಉದ್ದೇಶ ಸರ್ಕಾರ ಹೊಂದಿದೆ ಎಂದರು.
ಪಾಲಿಕೆ ಮೇಯರ್ ಪಿ.ಗಾದೆಪ್ಪ ಮಾತನಾಡಿ, ಮಹಾವೀರರು ಜಗತ್ತಿಗೆ ನೀಡಿದ ಶಾಂತಿ ಮತ್ತು ಅಹಿಂಸೆಯ ಸಂದೇಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ. ಮಹಾವೀರರ ಬೋಧನೆಯಂತೆ ದಾನ, ಧರ್ಮ ಮತ್ತು ಸತ್ಯದ ಹಾದಿಯಲ್ಲಿ ನಡೆಯುವ ಸಂಕಲ್ಪ ಸಮಾಜದವರು ಹೊಂದಿದ್ದಾರೆ ಎಂದರು.
ಎಡಿಸಿ ಮಹಮ್ಮದ್ ಎನ್.ಜುಬೇರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಮೆರಿಕಾ ಬೆಂಬಲಿತ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಂತಹ ಜಾಗತಿಕ ಅಶಾಂತಿಯ ಸಂದರ್ಭದಲ್ಲಿ, ಮಹಾವೀರರು ಬೋಧಿಸಿದ ಶಾಂತಿ ಮತ್ತು ಅಹಿಂಸೆಯ ಸಂದೇಶಗಳು ಅತ್ಯಂತ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು. ಜಯಂತಿ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮಹಾವೀರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
=====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net