ಬಳ್ಳಾರಿ : ನಗರದ ವಿವಿಧೆಡೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಂಟಿ ಸಹಕಾರದೊಂದಿಗೆ ದಾಳಿ ನಡೆಸಿ ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಿ ಶಿಕ್ಷಣ ಇಲಾಖೆಗೆ ಒಪ್ಪಿಸಲಾಗಿದೆ. ಇಲ್ಲಿನ ನಾನಾ ವೃತ್ತ ಹಾಗೂ ರಸ್ತೆಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ ಸಮಿತಿಯೊಂದಿಗೆ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.