ರಕ್ತದಾನದಿಂದ ಜೀವ ಉಳಿಸಿ

ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಉದ್ಘಾಟಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಂ.ಎ. ಶಕೀಬ್, ನೋಡಲ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಇದ್ದರು.
ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಉದ್ಘಾಟಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಂ.ಎ. ಶಕೀಬ್, ನೋಡಲ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕುಲಪತಿ
  • ರಕ್ತದಾನ
  • ವಿದ್ಯಾಲಯ
ಬಳ್ಳಾರಿ : ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಜೀವ ಉಳಿಸುವ ಕೆಲಸ ಯುವರೆಡ್ ಕ್ರಾಸ್ ಮಾಡುತ್ತಿದೆ ಎಂದು ವಿಎಸ್‌ಕೆ ವಿವಿ ಕುಲಪತಿ ಪ್ರೊ.ಎಂ ಮುನಿರಾಜು ಹೇಳಿದರು.
ನಗರದ ವಿಎಸ್‌ಕೆ ವಿವಿಯಲ್ಲಿ ಜಿಲ್ಲಾ ಯುವ ರೆಡ್ ಕ್ರಾಸ್ ಘಟಕ ಹಾಗೂ ವಿಶ್ವ ವಿದ್ಯಾಲಯದ ಅಧೀನದ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಿಗೆ ಬುಧವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ರಕ್ತದಾನ ಮಾಡುವುದರಿಂದ ವಿವಿ ಕೀರ್ತಿ ಹೆಚ್ಚಾಗುತ್ತದೆ. ಒಬ್ಬ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಇದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿರಿ. ವಿವಿಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ಹೆಚ್ಚು ರಕ್ತದಾನ ಮಾಡುವವರನ್ನು ವಿವಿಯ ವತಿಯಿಂದ ಅತ್ಯುತ್ತಮ ಗೌರವ ಪ್ರಶಸ್ತಿ ನೀಡುವುದಾಗಿ ಹೇಳಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net