ಹರಪನಹಳ್ಳಿ ತಾಲೂಕಿನ ಹಲುವಾಗಲು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವವನ್ನು ಕಾಂಗ್ರೆಸ್ ಮುಖಂಡ ಎಚ್.ಎಂ.ಮಲ್ಲಿಕಾರ್ಜುನಸ್ವಾಮಿ ಉದ್ಘಾಟಿಸಿದರು. ಪ್ರಾಚಾರ್ಯರಾದ ಶಶಿಧರ್, ಶಾಂತಾ ವಸ್ತ್ರದ್, ಅಂಜೀನಪ್ಪ , ಎಚ್.ಜಡೆಪ್ಪ, ಬಿ.ಎಂ.ವೀರಯ್ಯ, ವಾಲಿ ಚನ್ನಬಸಪ್ಪ ಇಟ್ಟಿಗಿ, ಯುವರಾಜಗೌಡ, ಯು.ಮಾರುತಿ, ಎಚ್.ರಾಮಪ್ಪ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹಿಂದುಳಿದ
ಗ್ರಾಮೀಣ
ಪ್ರದೇಶ
ಹರಪನಹಳ್ಳಿ: ವಸತಿ ಶಾಲೆಗಳು ಬಡವರು, ಹಿಂದುಳಿದ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ಮಕ್ಕಳ ಬದುಕಿಗೆ ಆಶಾಕಿರಣವಾಗಿವೆ ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ.ಮಲ್ಲಿಕಾರ್ಜುನಸ್ವಾಮಿ ಹೇಳಿದರು.
ಹಲುವಾಗಲು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲೂಕಿನ ಹಳೆಯ ವಸತಿ ಶಾಲೆಯಾದ ಹಲುವಾಗಲು ಮುರಾರ್ಜಿ ದೇಸಾಯಿ ವಸತಿ ಶಾಲೆ ನವೀಕರಣಕ್ಕೆ 5 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಪ್ರಾಚಾರ್ಯ ನಾಗರಾಜ ಟಿ.ಕನ್ನಿಹಳ್ಳಿ ಮಾತನಾಡಿ, ಶಾಸಕಿ ಎಂಪಿ ಲತಾ ಮಲ್ಲಿಕಾರ್ಜುನ ಹಾಗೂ ಅವರ ಪತಿ ಎಚ್.ಎಂ.ಮಲ್ಲಿಕಾರ್ಜುನ್ ಕಾಳಜಿಯಿಂದ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗೆ ಬೆಂಚ್, ಮಂಚ, ಕಂಪ್ಯೂಟರ್, ಹೈಮಾಸ್ಟ್ ಲೈಟ್, 24ಗಂಟೆ ಬಿಸಿನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.