ಸೀರತ್ ಅಭಿಯಾನ

ಸಯ್ಯದ್ ನಿಜಾಮುದ್ದೀನ್
ಸಯ್ಯದ್ ನಿಜಾಮುದ್ದೀನ್
Published on

ಪ್ರಮುಖ ಮುಖ್ಯಾಂಶಗಳು

  • ವಿಚಾರ ವಿನಿಮಯ ಕಾರ್ಯಕ್ರಮ

ಬಳ್ಳಾರಿ :

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ) ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಸಯ್ಯದ್ ನಿಜಾಮುದ್ದೀನ್ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಅವರ ಜೀವನ ಹಾಗೂ ಸಂದೇಶ ಕನ್ನಡ ಜನತೆಗೆ ಪರಿಚಯಿಸುವುದು. ಅವರ ಕುರಿತು ಇರುವ ತಪ್ಪು ಕಲ್ಪನೆ ದೂರ ಮಾಡುವುದು ಮತ್ತು ವಿವಿಧ ಸಮುದಾಯಗಳ ನಡುವಿನ ಬಾಂಧವ್ಯ ಮತ್ತಷ್ಟು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.

ಸಾಹಿತಿ ಯೋಗೇಶ್ ಮಾಸ್ಟರ್ ಅವರು ಬರೆದ ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ) ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಎ.ಎಸ್. ಪುತ್ತಿಗೆ ಅವರ ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ) ಕೃತಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಅಭಿಯಾನದಡಿ ವಿಚಾರಗೋಷ್ಠಿ, ಸಾರ್ವಜನಿಕ ಸಮಾವೇಶ, ಸಂವಾದ ಹಾಗೂ ಚರ್ಚಾಗೋಷ್ಠಿ, ಸೀರತ್ ಪ್ರವಚನ, ಪ್ರದರ್ಶನ, ಸಮಾಜಸೇವಾ ಚಟುವಟಿಕೆಗಳು ಮತ್ತು ಸೌಹಾರ್ದ ಸಂದೇಶ ರ‌್ಯಾಲಿಗಳನ್ನು ಆಯೋಜಿಸಲಾಗುವುದು ಎಂದರು. ಪ್ರಮುಖರಾದ ಸಿದ್ದಣ್ಣ, ಅಬ್ದುಲ್ ಖಾಲಿಕ್, ಸಯ್ಯದ್ ಅಮ್ಜದ್ ಹುಸೇನ್, ನೌಜ್ ಬೆಲಗಾಮಿ, ಲತೀಫ್ ಅಹ್ಮದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net