ಕಂಪ್ಲಿ: ಪಶ್ಚಿಮ ಬಂಗಾಳ, ಆಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಬೈಕ್ ರ‌್ಯಾಲಿ ನಡೆಸಿ ವಿಜಯೋತ್ಸವ ಆಚರಿಸಿದರು.
ಬಿಎಲ್‌ಒ-1 ಗೊರ್ತಿ ಶ್ರೀನಿವಾಸ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಇತಿಹಾಸ ಸೃಷ್ಟಿಸಿದ್ದಾರೆ. ಸನಾತನ ಧರ್ಮ ಹಾಗೂ ಸಮಸ್ತ ಹಿಂದೂಗಳ ಮೇಲಾಗುತ್ತಿದ್ದ ದೌರ್ಜನ್ಯವನ್ನು ಸಹಿಸಲಾಗದು ಎನ್ನುವ ಸಂದೇಶ ನೀಡಿದ್ದಾರೆ ಎಂದರು.