ಕೊಟ್ಟೂರು ತಾಲೂಕು ಕಚೇರಿಯಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ಜಿ.ಕೆ.ಅಮರೇಶ, ಜಿಪಂ ಮಾಜಿ ಉಪಾಧ್ಯಕ್ಷ ದೊಡ್ಡರಾಮಣ್ಣ, ಮಾಜಿ ಸದಸ್ಯ ಪಂಪಣ್ಣ, ಉದ್ಯಮಿ ಡಾ.ತಿಪ್ಪೇಸ್ವಾಮಿ ವೆಂಕಟೇಶ್ ಇತರರಿದ್ದರು.
ಕೊಟ್ಟೂರು: ಮಹಾನ್ ವಚನಕಾರ, ತತ್ವಜ್ಞಾನಿ, ಸಮಾಜ ಸುಧಾರಕ, ಕರ್ಮಯೋಗಿ, ಕೆರೆ, ಕಟ್ಟೆ, ದೇವಸ್ಥಾನಗಳನ್ನು ನಿರ್ಮಿಸಿ ಸಮಾಜಮುಖಿ ಕಾರ್ಯನಿರ್ವಹಿಸಿದ ಶರಣ ಸಿದ್ದರಾಮೇಶ್ವರ ಎಂದು ತಹಸೀಲ್ದಾರ್ ಜಿ.ಕೆ.ಅಮರೇಶ ಹೇಳಿದರು.
ಪಟ್ಟಣದ ತಾಲೂಕ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅನುಭವ ಮಂಟಪದ 3ನೇ ಅಧ್ಯಕ್ಷರಾಗಿದ್ದ ಸಿದ್ದರಾಮೇಶ್ವರರು ಸಾವಿರಾರು ವಚನಗಳ ಮೂಲಕ ಸಾಮಾಜಿಕ ಅಸಮಾನತೆ, ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ತೊಲಗಿಸಲು ಪ್ರಯತ್ನಿಸಿದ್ದರು. ಕರ್ತವ್ಯವೇ ದೇವರೆಂದು ನಂಬಿದ್ದ ಗಾರುಢಿಗ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ದೊಡ್ಡರಾಮಣ್ಣ, ಮಾಜಿ ಸದಸ್ಯ ಪಂಪಣ್ಣ, ಉದ್ಯಮಿ ಡಾ.ತಿಪ್ಪೇಸ್ವಾಮಿ ವೆಂಕಟೇಶ್, ಪ್ರಮುಖರಾದ ಪಿ.ಎಚ್.ಸಣ್ಣ ರಾಮಪ್ಪ, ಪಿಡಬ್ಲುೃಡಿ ಇಂಜಿನಿಯರ್ ಕೊಟ್ರೇಶ್ ಇತರದ್ದರು.