ಅಲ್ಪಾವಧಿ ಬೆಳೆಗಿರಲಿ ಆದ್ಯತೆ

ಕುರುಗೋಡು ತಾಲೂಕಿನ ಮುಷ್ಟಗಟ್ಟೆ ಗ್ರಾಮದ ರೈತ ಮಾರೆಪ್ಪ ಅವರ ಜಮೀನಿನಲ್ಲಿ ಸೂರ್ಯಕಾಂತಿ ಬೆಳೆಯನ್ನು ಸಹಾಯಕ ಕೃಷಿ ನಿರ್ದೇಶಕ ಗರ್ಜೆಪ್ಪ, ಕೃಷಿ ಅಧಿಕಾರಿ ದೇವರಾಜ್ ಪರಿಶೀಲಿಸಿದರು. ರೈತರಾದ ಶ್ರೀಕಾಂತ್, ನಾಗರಾಜ್ ಇತರರಿದ್ದರು.
ಕುರುಗೋಡು ತಾಲೂಕಿನ ಮುಷ್ಟಗಟ್ಟೆ ಗ್ರಾಮದ ರೈತ ಮಾರೆಪ್ಪ ಅವರ ಜಮೀನಿನಲ್ಲಿ ಸೂರ್ಯಕಾಂತಿ ಬೆಳೆಯನ್ನು ಸಹಾಯಕ ಕೃಷಿ ನಿರ್ದೇಶಕ ಗರ್ಜೆಪ್ಪ, ಕೃಷಿ ಅಧಿಕಾರಿ ದೇವರಾಜ್ ಪರಿಶೀಲಿಸಿದರು. ರೈತರಾದ ಶ್ರೀಕಾಂತ್, ನಾಗರಾಜ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಸಲಹೆ
  • ಕುರುಗೋಡು ರೈತರ ಜಮೀನಿಗೆ ಭೇಟಿ
ಕುರುಗೋಡು: ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಮಳೆಯ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಅಲ್ಪಾವಧಿ ಬೆಳೆ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಸಲಹೆ ನೀಡಿದರು.
ತಾಲೂಕಿನ ವಿವಿಧ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಬಹುತೇಕ ರೈತರು ಮೆಣಸಿನಕಾಯಿ, ಭತ್ತ, ತೊಗರಿ, ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರೆ, ಈ ಬಾರಿ ಮುಂಗಾರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ. ರೈತರ ಬೆಳೆಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಲ್ಪಾವಧಿ ಬೆಳೆಗಳಾದ ಹೆಸರು, ಬೇಳೆ, ಉದ್ದು, ಅಲಸಂದಿ, ಎಣ್ಣೆಕಾಳು, ಸೂರ್ಯಕಾಂತಿ, ಸಾಸಿವೆ, ರಾಗಿ, ಸಜ್ಜೆಯನ್ನು ಬೆಳೆಯುವುದರಿಂದ ಆರ್ಥಿಕ ನಷ್ಟದಿಂದ ಪಾರಾಗಬಹುದು ಎಂದರು.
ಕೃಷಿ ಅಧಿಕಾರಿ ದೇವರಾಜ್ ಮಾತನಾಡಿ, ಇಲಾಖೆಯಿಂದ ಸಿಗುವ ಸೌಲಭ್ಯದ ಪ್ರಯೋಜನ ಪಡೆದು ಹನಿ ಮತ್ತು ತುಂತುರು ನೀರಾವರಿ ಪದ್ಧತಿ ಮೂಲಕ ವಿವಿಧ ಬೆಳೆ ಬೆಳೆಯಲು ರೈತರು ಮುಂದಾಗಬೇಕು. ಕಳಪೆ ಗೊಬ್ಬರ, ಬಿತ್ತನೆಬೀಜದ ಬಗ್ಗೆ ಜಾಗ್ರತೆ ವಹಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net