ಕಂಪ್ಲಿ: ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕು ಅಧ್ಯಕ್ಷ ಐ.ಹೊನ್ನೂರ್ ಸಾಬ್ ಒತ್ತಾಯಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಕಾರ್ಮಿಕರನ್ನು ಕಾಯಂಗೊಳಿಸಬೇಕು. ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಬದ್ಧತೆ ತೋರಬೇಕು. ದುಡಿಯುವ ಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವುದರೊಂದಿಗೆ ಹಕ್ಕುಗಳನ್ನು ಮೊಟಕುಗೊಳಿಸಬಾರದು ಎಂಬುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 30ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಲಾಗುವುದು ಎಂದು ತಿಳಿಸಿದರು.
ಸಿಐಟಿಯು ತಾಲೂಕು ಸಮಿತಿ ಸದಸ್ಯ ಬಂಡಿ ಬಸವರಾಜ, ಪದಾಧಿಕಾರಿಗಳಾದ ಆರ್.ನಾಗರಾಜ, ಮೆಹಬೂಬ್, ರಂಗಯ್ಯ, ನಾಗರಾಜ, ಶಿವಕುಮಾರ್, ಕೃಷ್ಣ ಇತರರಿದ್ದರು.