ಪ್ರಸಕ್ತ ಸಾಲಿನಲ್ಲಿ ರಾಜ್ಯದ 508 ಶಾಲೆಗಳಿಗೆ 2.77 ಕೋಟಿ ರೂ. ಮೌಲ್ಯದ 4,064 ಡೆಸ್ಕ್‌ಗಳನ್ನು ಒದಗಿಸಿದ್ದು, ಇದರಿಂದ 20,320 ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈವರೆಗೆ 11,621 ಪೀಠೋಪಕರಣಗಳನ್ನು ಒದಗಿಸಲಾಗಿದೆ. ಯೋಜನೆ ಪಾಲುದಾರ ಕುಟುಂಬಗಳ ಮಕ್ಕಳಿಗೆ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಈತನಕ ಒಟ್ಟು 1,17,934 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.