ಏನಿದು ವಿವಾದ : ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಆರೋಪದಡಿ ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಅಂತರಗಂಗಮ್ಮ ಗುಡ್ಡದಲ್ಲಿ ನಿ.ನ್ಯಾಯಮೂರ್ತಿ ಸುಪ್ರಿಂ ಕೋರ್ಟ್ ನಿ.ನ್ಯಾಯಾಧೀಶ ಸುಧಾಂಶ ಧುಲಿಯಾ ನೇತೃತ್ವದ ಸಮಿತಿಯೂ ಡಿ.10 ರಂದು ಭೇಟಿ ನೀಡಿ ಡ್ರೋನ್ ಮೂಲಕ ಸರ್ವೇ ನಡೆಸಿತ್ತು. ಇದರಲ್ಲಿ ಅಂತರಗಂಗಮ್ಮ ಹೆಸರಿನ 68.50 ಹೆಕ್ಟೇರ್, ಸಿದ್ದಾಪುರದಲ್ಲಿನ ಬಿಐಒಸಿ ಕಂಪನಿಯ 27.12 ಹೆಕ್ಟೇರ್, ವೈ. ಮಹಾಬಲೇಶ್ವರಪ್ಪ ಸನ್ಸ್ ಹೆಸರಿನ 20.24 ಹೆಕ್ಟೇರ್, ಒಬಳಾಪುರಂ ಗ್ರಾಮದಲ್ಲಿ ಒಎಂಸಿ ಹೆಸರಿನ 25.98 ಹೆಕ್ಟೇರ್, ಒಎಂಸಿ2 ಹೆಸರಿನ 39.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿ ಗುತ್ತಿಗೆ ಸಂಬಂಧ ಎರಡು ಹಂತಗಳಲ್ಲಿ ಸರ್ವೇ ವೇಳೆ ಒತ್ತುವರಿ ಬೆಳಕಿಗೆ ಬಂದಿದೆ. ಸರ್ವೇಯಲ್ಲಿ ಶಾಸಕ ಜಿ.ಜನಾರ್ದನರೆಡ್ಡಿ ಒಡೆತನದ ಒಎಂಸಿ 2 ಹೆಸರಿನ 39.50 ಹೆಕ್ಟೇರ್ ಹಾಗೂ ಅಂತರಗಂಗಮ್ಮ ಹೆಸರಿನ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿ ಗುತ್ತಿಗೆ ಪ್ರದೇಶ ಮತ್ತು ಗಡಿಗಳು ಹೊಂದಾಣಿಕೆಯಾಗುತ್ತಿಲ್ಲ. ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮೇಣ ಮಾಡಿವೆ ಎಂಬುದಾಗಿ ವರದಿ ನೀಡಿದ್ದವು.