ವಚನಗಳ ಮೂಲಕ ಸಾಮಾಜಿಕ ಜಾಗೃತಿ

ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಉದ್ಘಾಟಿಸಿದರು. ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಎಚ್.ತಿಪ್ಪೇಸ್ವಾಮಿ, ಸಮಾಜಕಾರ್ಯ ವಿಭಾಗದ ಸಂಯೋಜಕಿ ಡಾ.ಕೆ.ಜಿ.ಸುಮಾ ಇತರರಿದ್ದರು.
ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಉದ್ಘಾಟಿಸಿದರು. ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಎಚ್.ತಿಪ್ಪೇಸ್ವಾಮಿ, ಸಮಾಜಕಾರ್ಯ ವಿಭಾಗದ ಸಂಯೋಜಕಿ ಡಾ.ಕೆ.ಜಿ.ಸುಮಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಹೇಳಿಕೆ
  • ವಿಚಾರ ಸಂಕಿರಣ
ಸಂಡೂರು: ಮೂಢನಂಬಿಕೆ, ಕಂದಾಚಾರ ಹಾಗೂ ಅಂಧ ಶ್ರದ್ಧೆಗಳ ವಿರುದ್ಧ ಬುದ್ಧ ನಿರಂತರವಾಗಿ ಹೋರಾಡಿ, ಅಹಿಂಸೆ, ಕರುಣೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದರು ಎಂದು ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಹೇಳಿದರು.
ಬುದ್ಧ, ಬಸವ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಮಾತನಾಡಿ, ಮೇಲು ಕೀಳು ಎಂಬ ಭಾವನೆ ತೊರೆದು ಎಲ್ಲರನ್ನೂ ಸಮನಾಗಿ ಕಾಣಬೇಕು ಎಂದು ಬಸವಣ್ಣ ಅವರು 12ನೇ ಶತಮಾನದಲ್ಲಿ ಸಾರಿದ್ದರು. ಮೂಢನಂಬಿಕೆ, ಕಂದಾಚಾರ ಹಾಗೂ ಅನಗತ್ಯ ಸಂಪ್ರದಾಯಗಳ ವಿರುದ್ಧ ಬಸವಣ್ಣ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ್ದರು. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇಂಥ ಕಾರ್ಯಕ್ರಮಗಳು ಅಗತ್ಯ ಎಂದರು.
ಪ್ರಾಧ್ಯಾಪಕ ಕೆ.ಸಿ.ಮಹೇಶ್ ಮಾತನಾಡಿ, ಸಾಮಾಜಿಕ ಅಸಮಾನತೆ, ಹಸಿವು, ಅನ್ಯಾಯ ಹಾಗೂ ಶೋಷಣೆ ವಿರುದ್ಧ ಹೋರಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಬ್ಬರಿಗೂ ಗೌರವಯುತ ಬದುಕು ದೊರೆಯಬೇಕಾದರೆ ಹಸಿವು ಮತ್ತು ಬಡತನ ನಿರ್ಮೂಲನೆ ಅಗತ್ಯ. ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾನದ ಶಕ್ತಿಯೇ ಪ್ರಮುಖ ಆಧಾರವಾಗಿದ್ದು, ಜಾಗೃತ ಮತದಾರರೇ ಉತ್ತಮ ಆಡಳಿತ ನಿರ್ಮಿಸಬಲ್ಲರು ಎಂದರು.
ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಎಚ್.ತಿಪ್ಪೇಸ್ವಾಮಿ, ಡಾ.ಮಲ್ಲಯ್ಯ, ಡಾ.ಪಿ.ಶರತ್ ಕುಮಾರ್, ಡಾ.ಕೆ.ಜಿ.ಸುಮಾ, ಡಾ.ಬಿ.ಎ.ಚೌಡಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net