ನಿಷ್ಠೆಯಿಂದ ಸಮಾಜ ಸುಧಾರಣೆ ಸಾಧ್ಯ

ಹರಪನಹಳ್ಳಿಯಲ್ಲಿ ಶನಿವಾರ ಶೈಕ್ಷಣಿಕ ಕಾರ್ಯಾಗಾರವನ್ನು ಶಾಸಕಿ ಎಂ. ಪಿ. ಲತಾ ಮಲ್ಲಿಕಾರ್ಜುನ ಉದ್ಘಾಟಿಸಿದರು. ವರಸದ್ಯೋಜಾತ ಸ್ವಾಮೀಜಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕಿ ಲತಾ ಮಳ್ಳೂರು, ತಾಪಂ ಇಒ ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಜಿ. ಮನೋಹರ್, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎ.ಎಚ್.ಎಂ, ದಿವಾಕರ್ ನಾರಾಯಣ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗುರುಮೂರ್ತಿ, ಸಂಗಯ್ಯ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶೈಕ್ಷಣಿಕ ಕಾರ್ಯಾಗಾರ
  • ಹೆಣ್ಣು ಮಕ್ಕಳು

ನಿಷ್ಠೆಯಿಂದ ಸಮಾಜ ಸುಧಾರಣೆ ಸಾಧ್ಯ

ಹರಪನಹಳ್ಳಿ: ನಾಲ್ಕು ಗೋಡೆಗಳ ಮಧ್ಯೆ ಜೀವಿಸುತ್ತಿದ್ದ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಾವಿತ್ರಿಬಾಯಿ ಫುಲೆ ಅವರ ಪಾತ್ರ ಬಹುಮುಖ್ಯವಾದದ್ದು ಎಂದು ತೆಗ್ಗಿನ ಮಠ ಸಂಸ್ಥಾನದ ಪೀಠಾಧಿಪತಿ ವರಸದ್ಯೋಜಾತ ಸ್ವಾಮೀಜಿ ತಿಳಿಸಿದರು.
ನಗರದ ತೆಗ್ಗಿನ ಮಠ ಸಂಸ್ಥಾನದ ಟಿ. ಎಂ. ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ನಡೆದ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು.
ಪ್ರತಿಯೊಬ್ಬರು ದೇವರ ಮುಂದಿರುವ ದೀಪಗಳಂತೆ ಜೀವಿಸಬೇಕು, ತಮ್ಮ ಕಾರ್ಯಗಳನ್ನು ನಿಷ್ಠೆ ಪ್ರಾಮಾಣಿಕತೆಯಿಂದ ಮಾಡಿದರೆ ಸಮಾಜದ ಸುಧಾರಣೆ ಸಾಧ್ಯ. ಆಧುನಿಕ ಯುಗದಲ್ಲಿ ಹೆಣ್ಣು ಮಕ್ಕಳು ಇಂದು ಸರ್ವ ಕ್ಷೇತ್ರದಲ್ಲಿ ತಮ್ಮದೆ ಛಾಪು ಮೂಡಿಸಲು ಸಾವಿತ್ರಿಬಾಯಿ ಫುಲೆ ಅವರ ಶಿಕ್ಷಣ ಕ್ರಾಂತಿಯೇ ಕಾರಣ ಎಂದರು.
ಶಾಸಕಿ ಎಂ. ಪಿ. ಲತಾ ಮಲ್ಲಿಕಾರ್ಜುನ ಮಾತನಾಡಿ, ಜನ್ಮ ತಾಳಿದಾಗ ನಮ್ಮನ್ನು ಪೋಷಿಸಿ ಬೆಳೆಸುವವರು ತಂದೆ ತಾಯಿಗಳಾದರೆ, ದೊಡ್ಡವರಾದಾಗ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದಿ ನಮ್ಮೆಲ್ಲರ ಬದುಕಿಗೆ ದಾರಿ ದೀಪವಾಗಿರುವುದು ಶಿಕ್ಷಕರು.
ಸಾವಿತ್ರಿಬಾಯಿ ಫುಲೆಯವರ ಹೆಸರಿನಲ್ಲಿ ಸಂಘವನ್ನು ಕಟ್ಟುವುದು ಮಾತ್ರ ಸಂಘದ ಪದಾಧಿಕಾರಿಗಳ ಕೆಲಸವಲ್ಲ, ಅವರ ಹೆಸರಿಗೆ ಚ್ಯುತಿ ಬಾರದಂತೆ ನೋಡಿಕೊಳ್ಳುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ತಾಲೂಕಿನಲ್ಲಿ ಶಿಕ್ಷಕರು ಸಂಘಟನೆಯ ನೆಪದಲ್ಲಿ ಪಾಠ ಬೋಧನೆಗಿಂತ ಹೆಚ್ಚು ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ ಎಂದರು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕಿ ಹಾಗೂ ರಾಷ್ಟ್ರೀಯ ಅಧ್ಯಕ್ಷೆ ಲತಾ ಮಳ್ಳೂರು, ತಾ.ಪಂ ಇಒ ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಜಿ. ಮನೋಹರ್, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎ.ಎಚ್.ಎಂ ಹಾಗೂ ದಿವಾಕರ್ ನಾರಾಯಣ ಮಾತನಾಡಿದರು. ಇದೇ ವೇಳೆ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಹಾಗೂ ಹೊಸಪೇಟೆ ತಾಲೂಕು ಸಾವಿತ್ರಿಬಾಯಿ ಫುಲೆ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net