ಬಳ್ಳಾರಿ : ಪೋಕ್ಸೋ ಪ್ರಕರಣಗಳಲ್ಲಿ ಪೊಲೀಸ್ ಮತ್ತು ನ್ಯಾಯಾಂಗದ ಜತೆಗೆ ಸಮಾಜ ಹಾಗೂ ವಿದ್ಯಾರ್ಥಿಗಳ ಪಾತ್ರವೂ ಪ್ರಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಹೇಳಿದರು. ನಗರದ ರಾಘವ ಕಲಾಮಂದಿರದಲ್ಲಿ ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಸೈಬರ್ ಕ್ರೈಂ, ಮಾದಕ ದ್ರವ್ಯ ಮುಕ್ತ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.