ಮಣ್ಣಿನ ಗುಣ-ಧರ್ಮಗಳ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯ ಉದ್ದೇಶ

ಹಗರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮವನ್ನು ಜ್ಞಾನ ಕೇಂದ್ರದ ಪ್ರೊ.ಡಾ.ಬಿ.ಕೆ. ರಮೇಶ ಉದ್ಘಾಟಿಸಿದರು. ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ಪಾಲಯ್ಯ, ಡಾ.ಗಿರೀಶ್, ಮಣ್ಣು ವಿಜ್ಞಾನಿ ಡಾ.ಎಸ್.ರವಿ, ಗೃಹ ವಿಜ್ಞಾನಿ ಡಾ.ರಾಜೇಶ್ವರಿ, ಸಿಬ್ಬಂದಿ ಡಾ.ಎಂ.ಆರ್.ಗೋವಿಂದಪ್ಪ, ಡಾ.ಮಂಜುನಾಥ, ಎನ್.ಡಾ.ಬಸವರಾಜ , ಡಾ.ನಾಗೇಶ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಣ್ಣಿನ ಸಂರಕ್ಷಣೆ
  • ಜೀವರಾಶಿಗಳ ಯೋಗಕ್ಷೇಮ
  • ಪ್ರಮುಖ ಸಂಪನ್ಮೂಲ

ಬಳ್ಳಾರಿ :  ತಾಲೂಕಿನ ಹಗರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆರೋಗ್ಯಕರ ನಗರಗಳಿಗೆ ಆರೋಗ್ಯಕರ ಮಣ್ಣು ಎಂಬ ಧ್ಯೇಯವಾಕ್ಯದಡಿ ಆಯೋಜಿಸಿದ್ದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಿನೇದಿನೆ ಮಣ್ಣು ಮಲಿನವಾಗುತ್ತಿದ್ದು, ಇದರ ಸಂರಕ್ಷಣೆಗೆ ಸಾವಯವ ಮತ್ತು ಜೈವಿಕ ಗೊಬ್ಬರಗಳ ಬಳಕೆ ಮಾಡಬೇಕು. ಇದರಿಂದ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬಹುದು ಎಂದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಪಾಲಯ್ಯ ಮಾತನಾಡಿ, ಪರಿಸರದಲ್ಲಿ ಶೇ. 60ರಷ್ಟು ಜೀವರಾಶಿಗಳ ಯೋಗಕ್ಷೇಮಕ್ಕೆ ಮಣ್ಣು ಪ್ರಮುಖ ಅಡಿಪಾಯವಾಗಿದೆ. ಮಣ್ಣಿನ ಅಮೂಲ್ಯವಾದ ಗುಣ ಗಮನದಲ್ಲಿಟ್ಟುಕೊಂಡು ಮಣ್ಣು ಹಾಗೂ ಮಣ್ಣಿನ ಆರೋಗ್ಯವನ್ನು ಸಂರಕ್ಷಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.
ಮಣ್ಣು ಒಂದು ಪ್ರಮುಖ ಸಂಪನ್ಮೂಲವಾಗಿದೆ. ಇದು ಆಹಾರ ಉತ್ಪಾದನೆ, ನೀರು ಶುದ್ಧೀಕರಣ ಮತ್ತು ಉಷ್ಣತೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯಕರ ನಗರ ನಿರ್ಮಾಣಕ್ಕೆ ಮಣ್ಣಿನ ಸಂರಕ್ಷಣೆ ಬಹು ಮುಖ್ಯವಾಗಿದ್ದು, ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅಷ್ಟೇ ಮುಖ್ಯವಾಗಿದೆ ಎಂದರು.
====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net