ಬ್ಯಾಲಾಳ ಕೆರೆಯಿಂದ ಮಣ್ಣು ಸಾಗಣೆ

ಬ್ಯಾಲಾಳ ಕೆರೆಯಲ್ಲಿ ಟಿಪ್ಪರ್ ಮೂಲಕ ಮಣ್ಣು ಸಾಗಣೆ ಮಾಡುತ್ತಿರುವುದು.
ಬ್ಯಾಲಾಳ ಕೆರೆಯಲ್ಲಿ ಟಿಪ್ಪರ್ ಮೂಲಕ ಮಣ್ಣು ಸಾಗಣೆ ಮಾಡುತ್ತಿರುವುದು.
Published on
ಹಗರಿಬೊಮ್ಮನಹಳ್ಳಿ: ಬ್ಯಾಲಾಳ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಣೆ ನಡೆಯುತ್ತಿದ್ದರೂ ಗಣಿ-ಭೂವಿಜ್ಞಾನ ಇಲಾಖೆ ಮೌನ ವಹಿಸಿದೆ ಎಂದು ಕೆರೆ ಹೋರಾಟ ಸಮಿತಿ ಅಧ್ಯಕ್ಷ ನಿಂಗಪ್ಪ ಆರೋಪಿಸಿದ್ದಾರೆ.
ಈ ಕುರಿತಾಗಿ 112 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಹೊಸಪೇಟೆ-ಹರಿಹರ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಕೆರೆಯಿಂದ ಮಣ್ಣು ಲೂಟಿ ಮಾಡಲಾಗುತ್ತಿದೆ. ಕೆರೆ ಅಂಗಳವನ್ನು ಆಳವಾಗಿ ಅಗೆದು ಗುಂಡಿಗಳನ್ನು ನಿರ್ಮಿಸಲಾಗುತ್ತಿದೆ. ಕೆರೆ ತುಂಬಿದಾಗ ಗುಂಡಿಗಳಲ್ಲಿ ಜನ-ಜಾನುವಾರು ಬಿದ್ದು ಅನಾಹುತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಎಂದು ನಿಂಗಪ್ಪ ಪ್ರಶ್ನಿಸಿದ್ದಾರೆ. ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರವೇ ಗ್ರಾಮ ಘಟಕದ ಅಧ್ಯಕ್ಷ ಕೆ.ಎಂ. ವಿಶ್ವನಾಥ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಿಎಸ್‌ಐ ಬಸವರಾಜ ಅಡವಿಬಾವಿ, ಟಿಪ್ಪರ್ ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಗಣಿ-ಭೂವಿಜ್ಞಾನ ಇಲಾಖೆ ನಿರ್ಧಾರವನ್ನು ಕಾಯಬೇಕಿದೆ ಎಂದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net