ನೀರಿನ ಸಮಸ್ಯೆ ನಿವಾರಿಸಿ

ನೀರಿನ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಕುಡತಿನಿ 6ನೇ ವಾರ್ಡ್‌ನಲ್ಲಿ ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ನೀರಿನ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಕುಡತಿನಿ 6ನೇ ವಾರ್ಡ್‌ನಲ್ಲಿ ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
Published on
ಕುರುಗೋಡು: ಪಟ್ಟಣದ 6ನೇ ವಾರ್ಡ್‌ನಲ್ಲಿ ಕುಡಿಯಲು ಹಾಗೂ ದೈನಂದಿನ ಬಳಕೆಗೆ ನೀರಿನ ಸಮಸ್ಯೆಯಾಗಿದೆ. ನೀರಿನ ಸಮಸ್ಯೆ ನಿವಾರಿಸುವಲ್ಲಿ ಪಟ್ಟಣ ಪಂಚಾಯತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಾರ್ಡ್ ಮಹಿಳೆಯರು ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಿದರು.
ವಾರ್ಡ್ ನಿವಾಸಿ ನಿಂಗಮ್ಮ ಮಾತನಾಡಿ, 6ನೇ ವಾರ್ಡ್‌ನಲ್ಲಿ ಹಲವಾರು ದಿನಗಳಿಂದ ನೀರಿನ ಸಮಸ್ಯೆಯಿದ್ದು, ಕೆಲಸ ಬಿಟ್ಟು ನೀರಿಗಾಗಿ ಕಾಯುವ ಪರಿಸ್ಥಿತಿ ಉಂಟಾಗಿದೆ. ನೀರಿನ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಸ್ಥಳೀಯ ಪಟ್ಟಣ ಪಂಚಾಯಿತಿಗೆ ತೆರಳಿ ಅಧಿಕಾರಿಗಳಿಗೆ ಎರಡು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೆರೆಯ ನೀರನ್ನು ಎಂಟು ದಿನಗಳಿಗೊಮ್ಮೆ ಬಿಡಲಾಗುತ್ತಿದ್ದು, ಅದು ಸಹ ನಮ್ಮ ವಾರ್ಡ್ ಗೆ ಸರಿಯಾಗಿ ಸರಬರಾಜು ಆಗುತ್ತಿಲ್ಲ ಎಂದು ದೂರಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net