ಹಳೆಯ ಪಿಂಚಣಿ ಯೋಜನೆ ಜಾರಿಗೆ ಕ್ರಮ

ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಶಾಸಕ ನಾರಾ ಭರತ್‌ರೆಡ್ಡಿ ಉದ್ಘಾಟಿಸಿದರು. ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ಡಿಎಚ್‌ಒ ವೈ.ರಮೇಶಬಾಬು, ಎಎಸ್ಪಿ ರವಿಕುಮಾರ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಮಲ್ಲೇಶ್, ಸುರೇಶ್, ಎಲ್.ಎನ್.ಶಾಸ್ತ್ರಿ, ಪಾಲಿಕೆಯ ಸದಸ್ಯರಾದ ಮಿಂಚು ಶ್ರೀನಿವಾಸಲು, ಎಂ.ರಾಜೇಶ್ವರಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರ
ಬಳ್ಳಾರಿ : ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಮರಳಿ ಜಾರಿಗೆ ತರಲು ರಾಜ್ಯ ಸರ್ಕಾರ ಕ್ರಮ ವಹಿಸಲಿದೆ ಎಂದು ಶಾಸಕ ನಾರಾ ಭರತ್‌ರೆಡ್ಡಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ಮಂಗಳವಾರ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಳೆಯ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಸಮಿತಿ ರಚಿಸಿ, ಐದು ರಾಜ್ಯಗಳಲ್ಲಿರುವ ವ್ಯವಸ್ಥೆಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ, ಈ ವರ್ಷದ ಬಜೆಟ್ ಅಧಿವೇಶನದ ವೇಳೆ ನಾನು ಸೇರಿ ಜಿಲ್ಲೆಯ ಎಲ್ಲ ಶಾಸಕರು ಸರ್ಕಾರದ ಗಮನ ಸೆಳೆಯುತ್ತವೆ ಎಂದರು.
ಜಿಲ್ಲೆಯಲ್ಲಿ ಸುಸಜ್ಜಿತವಾದ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಕ್ರಮ ವಹಿಸುವೆ. ಇದಲ್ಲದೇ ಸರ್ಕಾರಿ ನೌಕರರ ಗೃಹ ನಿರ್ಮಾಣಕ್ಕಾಗಿ ಖರೀದಿಯಾಗಿರುವ ಜಮೀನಿಗೆ ಸಂಬಂಧಿಸಿದ ಅನುಮೋದನೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಸರ್ಕಾರಿ ನೌಕರರು ದಿನವಿಡೀ ಕೆಲಸ ಮಾಡುತ್ತಾರೆ, ಜನರ ಸೇವೆಯನ್ನು ದೇವರ ಸೇವೆ ಎಂದು ತಿಳಿದು ಮಾಡುತ್ತಾರೆ. ಒಬ್ಬ ಸಾಮಾನ್ಯ ವ್ಯಕ್ತಿಗೆ ಸರ್ಕಾರಿ ಕಚೇರಿಯಲ್ಲಿ ಒಂದೇ ಕೆಲಸ. ಆದರೆ, ಒಬ್ಬ ಸರ್ಕಾರಿ ನೌಕರ ಸಾವಿರಾರು ಜನರ ಕೆಲಸ ಮಾಡಬೇಕು, ಹೀಗಾಗಿ ಒತ್ತಡದ ನಡುವೆ ಕೆಲಸ ಮಾಡುವ ನಿಮಗೆ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಉತ್ಸಾಹ ತರಲಿದೆ ಎಂದರು. ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರನ್ನು ಸನ್ಮಾನಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net