ಮೂಲ ಸೌಕರ್ಯ ಒದಗಿಸಲು ಕ್ರಮ

ಮೆಟ್ರಿ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಶಾಸಕ ಜೆ.ಎನ್.ಗಣೇಶ್ ಭೂಮಿ ಪೂಜೆ ನೆರವೇರಿಸಿದರು.
ಮೆಟ್ರಿ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಶಾಸಕ ಜೆ.ಎನ್.ಗಣೇಶ್ ಭೂಮಿ ಪೂಜೆ ನೆರವೇರಿಸಿದರು.
Published on
ಕಂಪ್ಲಿ: ಮೆಟ್ರಿಯ ಎಚ್‌ಆರ್‌ಎಂಎಸ್ ಶಾಲೆ ಕಟ್ಟಡಕ್ಕೆ ನಿವೇಶನ ಒದಗಿಸಲು ಜಿಲ್ಲಾಧಿಕಾರಿ ಜತೆ ಚರ್ಚಿಸುವುದಾಗಿ ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಮೆಟ್ರಿ ಗ್ರಾಮದಲ್ಲಿ ಕೆಕೆಆರ್‌ಡಿಬಿಯ 84 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದರು.
ಗ್ರಾಮದ ಪ್ರಮುಖರಾದ ಹೊಸಕೋಟೆ ಜಗದೀಶ, ನೇಣ್ಕಿ ಗಿರೀಶ್, ಎಚ್.ಕುಮಾರಸ್ವಾಮಿ, ಹೊನ್ನಳ್ಳಿ ಗಂಗಾಧರ, ಶಿವಪುತ್ರಪ್ಪ, ಎಚ್.ಜಗದೀಶ, ಮಲ್ಲಿಕಾರ್ಜುನ, ತಿಮ್ಮಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net