ಬಳ್ಳಾರಿ : ಇಲ್ಲಿನ ಕುರುವಳ್ಳಿ ತಿಮ್ಮಪ್ಪ ಮೆಮೋರಿಯಲ್ ಇಂಗ್ಲಿಷ್ ಮೀಡಿಯಾಂ ಸ್ಕೂಲ್‌ನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಹಿಮ ಬಿಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಕಣ್ಣಿಗೆ ಬಟ್ಟೆಕೊಂಡು ಸ್ಪರ್ಶ, ವಾಸನೆ ಹಾಗೂ ಶಬ್ಧದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಅಪರೂಪದ ‘ಗಾಂಧಾರಿ ಕಲೆ’ ಕರಗತಮಾಡಿಕೊಂಡಿರುವ ಹಿಮಬಿಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮಾಸಿಕ ಪರೀಕ್ಷೆ ಬರೆದರು. ಪ್ರಸ್ತಕ ಸಾಲಿನ ಎಲ್ಲ ವಿಷಯಗಳನ್ನು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದಿದ್ದಾಳೆ ಎಂದು ಶಾಲೆಯ ಮುಖ್ಯಸ್ಥರು ತಿಳಿಸಿದರು.