ವಿದ್ಯಾರ್ಥಿ ಅನುಮಾನಾಸ್ಪದ ಸಾವು

ವಿಶ್ವಾಸ್
ವಿಶ್ವಾಸ್
Published on

ಪ್ರಮುಖ ಮುಖ್ಯಾಂಶಗಳು

  • ಸಹಪಾಠಿಗಳ ನಡುವೆ ತೀವ್ರ ಜಗಳ
  • ಶವವನ್ನು ನೇಣು ಬಿಗಿದ ಸ್ಥಿತಿಯಲ್ಲಿ ತೂಗು
ಬಳ್ಳಾರಿ : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಲ್ಲಿನ ಅಶೋಕ ನಗರದ ಚೌದ್ರಿ ಪಿಜಿಯಲ್ಲಿ ಮಂಗಳವಾರ ನಡೆದಿದೆ. ಸಿರಗುಪ್ಪ ತಾಲೂಕಿನ ಟಿ. ರಾಂಪುರ ಗ್ರಾಮದ ನಿವಾಸಿ ವಿಶ್ವಾಸ್(24) ಮೃತ. ನಗರದ ಆರ್‌ವೈಎಂಸಿ ಕಾಲೇಜಿನಲ್ಲಿ ಇಂಜಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ವಿಶ್ವಾಸ್ ಶವ ನೇಣು ಬಿಗಿದ ಸ್ಥಿತಿಯಲ್ಲಿದೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದರೂ, ಮೃತನ ದೇಹದ ಮೇಲಿರುವ ಗಾಯದ ಗುರುತುಗಳು ಹಲವು ಸಂಶಯಗಳಿಗೆ ಕಾರಣವಾಗಿವೆ. ಮೃತದೇಹದ ತಲೆ ಹಾಗೂ ಎದೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಿರುವುದು ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ವಿಶ್ವಾಸ್ ಹಾಗೂ ಆತನ ಪಿಜಿ ಸಹಪಾಠಿಗಳ ನಡುವೆ ತೀವ್ರ ಜಗಳ ನಡೆದಿತ್ತು. ಸಹಪಾಠಿಗಳೇ ಆತನನ್ನು ಕೊಲೆ ಮಾಡಿ, ಬಳಿಕ ಸಾಕ್ಷೃ ನಾಶಪಡಿಸುವ ಉದ್ದೇಶದಿಂದ ಶವವನ್ನು ನೇಣು ಬಿಗಿದ ಸ್ಥಿತಿಯಲ್ಲಿ ತೂಗುಹಾಕಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಸದ್ಯಕ್ಕೆ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೌಲಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net