ಸಂಘದ ಜಿಲ್ಲಾಧ್ಯಕ್ಷ ಸಿ.ಎ.ಗಾಳೆಪ್ಪ ಮಾತನಾಡಿ, ತಾಲೂಕಿನ ಉಜ್ಜಿನಿ, ನಡುಮಾವಿನಹಳ್ಳಿ, ಹಿರೇವಡರಹಳ್ಳಿ, ಜಾಗಟಗೇರಿ, ಮೂರ್ತಿನಾಯಕನಹಳ್ಳಿ ಸೇರಿ ವಿವಿಧೆಡೆ ಶನಿವಾರ ದಿನ ಪೂರ್ತಿ ವಿದ್ಯುತ್ ಸಂಪರ್ಕ ಇಲ್ಲದೆ ಸಾರ್ವಜನಿಕರು ಸಮಸ್ಯೆ ಅನುಭವಿಸಿದರು. ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆ ಉಂಟಾಗದಂತೆ ನಿರಂತರ ವಿದ್ಯುತ್ ಸೌಲಭ್ಯ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಈ ಸಮಸ್ಯೆ ಮರುಕಳಿಸಿದರೆ ಕಚೇರಿಗೆ ಬೀಗ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.