ಡಾ.ಬಿ.ಅರ್.ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಿದ ವಿವಿಧ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವಂತೆ ಒತ್ತಾಯಿಸಿ ಹರಪನಹಳ್ಳಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ನಟರಾಜ್ ಅವರಿಗೆ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಕೆ.ಸುಭಾಷ್, ಪ್ರಮುಖರಾದ ಡಿ.ಛತ್ರಪತಿ, ಪ್ರಶಾಂತ ಶೃಂಗಾರತೋಟ, ಕೆ.ಭರತ್, ನಾಗರಾಜ ಬಿದ್ದಾಡಿ, ಮಲ್ಲಿಕಾರ್ಜುನ, ರಮೇಶ, ನಾಗರಾಜ, ಶ್ರೀಕಾಂತ, ಅಂಜಿನಪ್ಪ ಮಾಳಗಿ, ಶಶಿಕುಮಾರ್ ಇತರರಿದ್ದರು.
ಹರಪನಹಳ್ಳಿ: ಡಾ.ಬಿ.ಅರ್.ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಿದ ವಿವಿಧ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ವಹಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ನಟರಾಜಗೆ ಮನವಿ ಸಲ್ಲಿಸಿದರು.
ತಹಸೀಲ್ದಾರ್ ಗಿರೀಶ್ ಬಾಬು ಅವರು ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಲು ಆದೇಶಿಸಿ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೃಷಿ ಮತ್ತು ಕುಡಿಯುವ ನೈರ್ಮಲ್ಯ ಇಲಾಖೆ ಅಧಿಕಾರಿಗಳು ಪರಿನಿರ್ವಾಣ ದಿನ ಆಚರಿಸುವಲ್ಲಿ ನಿರ್ಲಕ್ಷೃ ತೋರಿವೆ ಎಂದು ದೂರಿದರು.
ಈ ಬಗ್ಗೆ ಬಿಇಒ ಲೇಪಾಕ್ಷಪ್ಪ ಅವರನ್ನು ಕೇಳಿದರೆ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿ ಕಚೇರಿ ಹಾಗೂ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಆಚರಿಸುವಲ್ಲಿ ನಿರ್ಲಕ್ಷೃ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಇಒ ಹಾಗೂ ಇತರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.