ಉಲ್ಲಂಘಿಸುವವರ ವಿರುದ್ಧ ಕ್ರಮವಹಿಸಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬರಪರಿಸ್ಥಿತಿ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬಿ.ನಾಗೇಂದ್ರ, ಡಿಸಿ ಕೆ.ನಾಗೇಂದ್ರ ಪ್ರಸಾದ್, ಎಸ್ಪಿ ಡಾ. ಸುಮನ್ ಡಿ.ಪನ್ನೇಕರ್, ಮೇಯರ್ ಪಿ.ಗಾದೆಪ್ಪ, ಲಿಡ್ಕರ್ ಅಧಕ್ಷ ಮುಂಡರಗಿ ನಾಗರಾಜ, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಇದ್ದರು. ==
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬರಪರಿಸ್ಥಿತಿ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬಿ.ನಾಗೇಂದ್ರ, ಡಿಸಿ ಕೆ.ನಾಗೇಂದ್ರ ಪ್ರಸಾದ್, ಎಸ್ಪಿ ಡಾ. ಸುಮನ್ ಡಿ.ಪನ್ನೇಕರ್, ಮೇಯರ್ ಪಿ.ಗಾದೆಪ್ಪ, ಲಿಡ್ಕರ್ ಅಧಕ್ಷ ಮುಂಡರಗಿ ನಾಗರಾಜ, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಇದ್ದರು. ==
Published on

ಪ್ರಮುಖ ಮುಖ್ಯಾಂಶಗಳು

  • ಮಾರಾಟಗಾರರ ವಿರುದ್ಧ ಪ್ರಕರಣ

ಬಳ್ಳಾರಿ :

ರಸಗೊಬ್ಬರ ಖರೀದಿಸುವಾಗ ರೈತರಿಗೆ ಅನಗತ್ಯವಾಗಿ ಇತರ ಸೂಕ್ಷ್ಮ ಪೋಷಕಾಂಶಗಳನ್ನು ಬಲವಂತವಾಗಿ ಜೋಡಿಸಿ ಮಾರಾಟ ಮಾಡುವ ಸಾಗಣೆದಾರರು ಮತ್ತು ಡೀಲರ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.

ಮಳೆ ಕೊರತೆ ಹಿನ್ನಲೆ ಸಾಂಪ್ರದಾಯಿಕ ಪದ್ಧತಿಗೆ ಹೋಲಿಸಿದರೆ ಕೂರಿಗೆ ಪದ್ಧತಿಯಲ್ಲಿ ಶೇ.60 ರಷ್ಟು ನೀರು ಉಳಿತಾಯವಾಗಲಿದ್ದು, ಕೇವಲ ಶೇ. 40 ರಷ್ಟು ನೀರಿನ ಅಗತ್ಯವಿರುತ್ತದೆ. ಈ ಪದ್ಧತಿಯಲ್ಲಿ ಪ್ರತಿ ಹೆಕ್ಟೇರ್‌ಗೆ 62.5 ಕೆಜಿ ಬೀಜ ಬೇಕಿದ್ದರೆ, ಕೂರಿಗೆ ಪದ್ಧತಿಯಲ್ಲಿ ಕೇವಲ 12.5 ಕೆಜಿ ಬೀಜ ಸಾಕು. ಇದರಿಂದ ರೈತರ ಉತ್ಪಾದನಾ ವೆಚ್ಚ ಗಣನೀಯವಾಗಿ ಕಡಿಮೆಯಾಗುತ್ತದೆ. ಸಾಮಾನ್ಯ ಪದ್ಧತಿಯಲ್ಲಿ ಪ್ರತಿ ಹೆಕ್ಟೇರ್‌ಗೆ 60 ರಿಂದ 70 ಕ್ವಿಂಟಲ್ ಇಳುವರಿ ಬಂದರೆ, ಕೂರಿಗೆ ಪದ್ಧತಿಯಲ್ಲಿ 40 ರಿಂದ 45 ಕ್ವಿಂಟಲ್ ಇಳುವರಿ ಪಡೆಯಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕುಡಿವ ನೀರಿನ ಅಭಾವ ತೀವ್ರಗೊಳ್ಳುತ್ತಿದ್ದು, ಜಿಲ್ಲೆಯ ಕೆರಗಳಲ್ಲಿ ನೀರಿನ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿದಿದೆ. ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸೂಕ್ತ ಕಾರ್ಯಯೋಜನೆ ರೂಪಿಸಿ ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.
ಡಿಸಿ ಕೆ.ನಾಗೇಂದ್ರ ಪ್ರಸಾದ್ ಮಾತನಾಡಿ, ಬೆಳೆ ವಿಮೆಯಲ್ಲಿ ಅಧಿಕಾರಿಗಳ ಜಾಗೃತಿಯ ಫಲವಾಗಿ ಪ್ರಸ್ತುತ ನೋಂದಾಯಿತ ರೈತರ ಸಂಖ್ಯೆ 37,000ಕ್ಕೆ ಏರಿಕೆಯಾಗಿದೆ. ಆ.14ರವರೆಗೆ ಸಮಯಾವಕಾಶವಿದ್ದು, ಕನಿಷ್ಠ 60,000ದಿಂದ 75,000 ರೈತರನ್ನು ವಿಮಾ ವ್ಯಾಪ್ತಿಗೆ ತರುವ ಗುರಿ ಹೊಂದಲಾಗಿದೆ ಎಂದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ಜು.1ರಿಂದ ಜಾರಿಗೆ ಬಂದಿರುವ ವಿಬಿ ಜಿ ರಾಮ್ ಜಿಯಡಿ
ಪ್ರಸ್ತುತ ರಾಜ್ಯದಲ್ಲಿ ಜಿಲ್ಲೆಯು ಉದ್ಯೋಗ ಖಾತ್ರಿ ಅನುಷ್ಠಾನದಲ್ಲಿ 2ನೇ ಸ್ಥಾನದಲ್ಲಿದೆ. ಇದರಲ್ಲಿ ಕಾಲುವೆ ಸ್ವಚ್ಛತೆ ಜತೆಗೆ ದನದ ಕೊಟ್ಟಿಗೆ, ಕೋಳಿ ಶೆಡ್, ಕೃಷಿ ಹೊಂಡ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ 10 ಎಕರೆ ಸರ್ಕಾರಿ/ಗೋಮಾಳ ಜಮೀನಿನಲ್ಲಿ ದೊಡ್ಡ ಕೆರೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net