26ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಸಂಡೂರು ತಾಲೂಕು ವೀರಶೈವ ಲಿಂಗಾಯತ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ತಾಲೂಕು ಅಧ್ಯಕ್ಷ ಉಪ್ಪಾರಹಳ್ಳಿ ಕಿನ್ನೂರೇಶ್ವರ ಮಾತನಾಡಿದರು. ಉಪಾಧ್ಯಕ್ಷ ಬಿ.ಜಿ.ಸಿದ್ದನಗೌಡ, ಪ್ರ.ಕಾರ್ಯದರ್ಶಿ ಸುರೇಶ್ ಗೌಡ, ತಾಲೂಕು ಸಂಘಟನಾ ಕಾರ್ಯದರ್ಶಿ ಬಿ.ಕೆ.ಬಸವರಾಜ, ಎಸ್.ವಿ.ಹಿರೇಮಠ ಇದ್ದರು.
ಸಂಡೂರು ತಾಲೂಕು ವೀರಶೈವ ಲಿಂಗಾಯತ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ತಾಲೂಕು ಅಧ್ಯಕ್ಷ ಉಪ್ಪಾರಹಳ್ಳಿ ಕಿನ್ನೂರೇಶ್ವರ ಮಾತನಾಡಿದರು. ಉಪಾಧ್ಯಕ್ಷ ಬಿ.ಜಿ.ಸಿದ್ದನಗೌಡ, ಪ್ರ.ಕಾರ್ಯದರ್ಶಿ ಸುರೇಶ್ ಗೌಡ, ತಾಲೂಕು ಸಂಘಟನಾ ಕಾರ್ಯದರ್ಶಿ ಬಿ.ಕೆ.ಬಸವರಾಜ, ಎಸ್.ವಿ.ಹಿರೇಮಠ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿ
  • ಅಗತ್ಯ
  • ದಾಖಲೆ
* ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಉಪ್ಪಾರಹಳ್ಳಿ ಕಿನ್ನೂರೇಶ್ವರ ಮಾಹಿತಿ
ಸಂಡೂರು: ಪ್ರತಿಭಾವಂತ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಮೇ26ರಂದು ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಉಪ್ಪಾರಹಳ್ಳಿ ಕಿನ್ನೂರೇಶ್ವರ ಹೇಳಿದರು.
ತಾಲೂಕು ವೀರಶೈವ ಲಿಂಗಾಯತ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಶನಿವಾರ ಮಾತನಾಡಿ, ಅಂದು ಬಸವಜಯಂತಿಯನ್ನು ಮಾಡಲಿದ್ದು, ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ.80 ಮತ್ತು ಪಿಯುಸಿಯಲ್ಲಿ ಶೇ.85ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು.
ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಮೇ 23ರೊಳಗೆ ಸಲ್ಲಿಸಬೇಕು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಈ ವೇಳೆ ಸನ್ಮಾನಿಸಲಾಗುವುದು.
ವಿರಕ್ತಮಠದ ಪ್ರಭುಸ್ವಾಮೀಜಿ, ಸಂಸದ ಈ.ತುಕಾರಾಮ್, ಶಾಸಕಿ ಅನ್ನಪೂರ್ಣ ತುಕಾರಾಮ್, ಎಂಎಲ್‌ಸಿ ವೈ.ಎಂ.ಸತೀಶ, ಕಸಾಪ ತಾಲೂಕು ಅಧ್ಯಕ್ಷ ಡಾ.ಬಿ.ನಾಗನಗೌಡ, ಒಪ್ಪತ್ತೇಶ್ವರಮಠದ ಪ್ರಭುಸ್ವಾಮೀಜಿ, ಸ್ಮಯೋರ್ ಎಂಡಿ ಬರ್ಹಿಜಿ ಅಜಯ್ ಘೋರ್ಪಡೆ ಇತರರು ಭಾಗವಹಿಸಲಿದ್ದಾರೆ ಎಂದರು.
ತಾಲೂಕು ಸಂಘಟನಾ ಕಾರ್ಯದರ್ಶಿ ಬಿ.ಕೆ.ಬಸವರಾಜ, ಸಹ ಕಾರ್ಯದರ್ಶಿ ಬಿ.ಎಂ.ಉಜ್ಜಿನಯ್ಯ, ಖಜಾಂಚಿ ಎಸ್‌ಟಿಡಿ.ರುದ್ರಗೌಡ, ಕಾರ್ಯಕಾರಿಣಿ ಸಮಿತಿ ಸದಸ್ಯ ಎಸ್.ವಿ.ಹಿರೇಮಠ, ಗಡಂಬ್ಲಿ ಚನ್ನಪ್ಪ, ಜೆ.ಎಂ.ಶಿವಪ್ರಸಾದ್, ಭುವನೇಶ ಮೇಟಿ, ಟಿ.ಮಹೇಶ, ಚರಂತಯ್ಯ ಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net