ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡನೀಯ

ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಜಂಟಿ ಸಮಿತಿ ನೇತೃತ್ವದಿಂದ ಪ್ರತಿಭಟನೆ ನಡೆಯಿತು. ಪದಾಧಿಕಾರಿಗಳಾದ ಸಿರಿಗೇರಿ ಪನ್ನರಾಜ್, ಪಿ.ಗಾದೆಪ್ಪ, ವರದರಾಜ್, ಯು.ಎರ‌್ರಿಸ್ವಾಮಿ, ವೀರಭದ್ರ, ನರಸಿಂಹ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಂಟಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ
ಬಳ್ಳಾರಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ಖಂಡಿಸಿ, ಇಲ್ಲಿನ ಗಡಿಗಿ ಚನ್ನಪ್ಪ ವೃತ್ತದಲ್ಲಿ ಜಂಟಿ ಸಮಿತಿ ನೇತೃತ್ವದಿಂದ ಪ್ರತಿಭಟನೆ ನಡೆಯಿತು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಪಕ್ಷದ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 24 ದಿನಗಳಿಂದ ವಿದ್ಯಾರ್ಥಿಗಳು ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ.
ಆದರೆ, ಪೋಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು ಸೇರಿದಂತೆ ಕಾರ್ಯಕರ್ತರ ಮೇಲೆ ಅತಿರೇಕದ ವರ್ತನೆ ತೋರಿ, ಲಾಠಿಚಾರ್ಜ್ ಹಾಗೂ ಟಿಯರ್ ಗ್ಯಾಸ್ ದಾಳಿ ನಡೆಸಿರುವುದು ಒಕ್ಕೂಟವೂ ತೀವ್ರವಾಗಿ ಖಂಡಿಸಿತು. ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ರೈತರು, ಜನಪರ ಸಂಘಟನೆಗಳ ಒಕ್ಕೂಟ, ಪ್ರಗತಿಪರ ಸಾಹಿತಿ ಹಾಗೂ ಹೋರಾಟಗಾರರು ಭಾಗವಹಿಸಿದ್ದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net