ನಗರದ ಅನುಗ್ರಹ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ವಿಶ್ವ ಆರೈಕೆದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರ ಜೀವನದಲ್ಲಿ ಆರೈಕೆದಾರರ ಪಾತ್ರ ಮಹತ್ವದಾಗಿದ್ದು, ವಿಶೇಷ ಚೇತನರ ಹಾಗೂ ಹಿರಿಯರನ್ನು ಆರೈಕೆ ಮಾಡುವುದು ವಿಶೇಷ ಸೇವೆಯಾಗಿದೆ ಎಂದರು.