ಪರಿಷತ್ ಸಾರ್ಥಕ ಸೇವೆ ಸಲ್ಲಿಸಿದೆ

ಬಳ್ಳಾರಿಯ ಸನ್ಮಾರ್ಗ ಗೆಳೆಯರ ಬಳಗದ ಸಭಾಭವನದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್‌ನ 112ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಸನ್ಮಾರ್ಗ ಗೆಳೆಯರ ಬಳಗದ ಅಧ್ಯಕ್ಷ ಎಚ್.ಲಕ್ಷ್ಮೀಕಾಂತರೆಡ್ಡಿ ಉದ್ಘಾಟಿಸಿದರು. ಪ್ರೊ.ಡಾ.ತಿಪ್ಪೇರುದ್ರ, ಕಸಾಪ ಕಾರ್ಯದರ್ಶಿ ಡಾ.ಶಿವಲಿಂಗಪ್ಪ ಹಂದಿಹಾಳು, ಕಥೆಗಾರ ವೀರೇಂದ್ರ ರಾವಿಹಾಳ್, ಚಿತ್ರ ಕಲಾವಿದರಾದ ಮಂಜುನಾಥ ಗೋವಿಂದವಾಡ, ಎಂ ರಫೀ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪರಿಷತ್
ಬಳ್ಳಾರಿ : ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಒಂದು ಶತಮಾನಕ್ಕೂ ಅಧಿಕ ಸೇವೆ ಸಲ್ಲಿಸುತ್ತಿದೆ ಎಂದು ಸನ್ಮಾರ್ಗ ಗೆಳೆಯರ ಬಳಗದ ಅಧ್ಯಕ್ಷ ಎಚ್. ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.
ನಗರದ ಸನ್ಮಾರ್ಗ ಗೆಳೆಯರ ಬಳಗದ ಸಭಾಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್‌ನ 112ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಜೀವಂತವಾಗಿ ಇಡುವಲ್ಲಿ ಪರಿಷತ್ತಿನ ಪಾತ್ರ ಮಹತ್ವವಾಗಿದೆ ಎಂದರು.
ಕಸಾಪ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಶಿವಲಿಂಗಪ್ಪ ಹಂದಿಹಾಳು ಮಾತನಾಡಿ, ಜಿಲ್ಲೆಗೆ 69 ವರ್ಷಗಳ ನಂತರ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಲಭ್ಯವಾಗಿದ್ದು, ಕಾನೂನಿನ ತೊಡಕಿನಿಂದಾಗಿ ಸಮ್ಮೇಳನ ವಿಳಂಬವಾಗುತ್ತಿದೆ. ಆದಷ್ಟು ಶೀಘ್ರ ಸಮ್ಮೇಳನ ಜಿಲ್ಲೆಯಲ್ಲಿ ನಡೆಸಲು ಸರ್ವ ರೀತಿಯ ಪ್ರಯತ್ನಿಸಲಾಗುವುದು ಎಂದರು.
====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net