ರಾಜ್ಯ ಸರ್ಕಾರ ಶೇ.5ರಷ್ಟು ಮೀಸಲಾತಿ ಕಲ್ಪಿಸಿ

ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ಕನ್ನಡ ಯುವಕ ಸಂಘದಿಂದ ಡಿಸಿ ನಾಗೇಂದ್ರ ಪ್ರಸಾದ್ ಕೆ., ಅವರಿಗೆ ಮನವಿ ಸಲ್ಲಿಸಲಾಯಿತು
ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ಕನ್ನಡ ಯುವಕ ಸಂಘದಿಂದ ಡಿಸಿ ನಾಗೇಂದ್ರ ಪ್ರಸಾದ್ ಕೆ., ಅವರಿಗೆ ಮನವಿ ಸಲ್ಲಿಸಲಾಯಿತು
Published on

ಪ್ರಮುಖ ಮುಖ್ಯಾಂಶಗಳು

  • ಮೀಸಲಾತಿ
ಬಳ್ಳಾರಿ : ಆಂಧ್ರದ ಗಡಿ ಭಾಗಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.5ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕನ್ನಡ ಯುವಕ ಸಂಘದಿಂದ ಪ್ರತಿಭಟಿಸಿ ಡಿಸಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಆಂಧ್ರಪ್ರದೇಶದಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕರ್ನಾಟಕದ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಕನಿಷ್ಠ ಶೇ. 5ರಷ್ಟು ಮೀಸಲಾತಿ ಘೋಷಿಸಬೇಕು. ಆಂಧ್ರಪ್ರದೇಶದ ಕಂದಾಯ ಅಧಿಕಾರಿಗಳು ನೀಡಿದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪರಿಗಣಿಸಿ, ಕರ್ನಾಟಕದ ವಸತಿ ನಿಲಯಗಳಲ್ಲಿ ಪ್ರವೇಶ ಹಾಗೂ ವಿದ್ಯಾರ್ಥಿ ವೇತನ ನೀಡಬೇಕು. ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಗಣಿತ, ವಿಜ್ಞಾನ ಮತ್ತು ಕನ್ನಡ ಶಿಕ್ಷಕರ ಕೊರತೆಯಿದ್ದು, ಕರ್ನಾಟಕ ಸರ್ಕಾರದ ವತಿಯಿಂದಲೇ ಅತಿಥಿ ಶಿಕ್ಷಕರನ್ನು ನೇಮಿಸಿ ಸಹಕರಿಸಬೇಕು. ಉದ್ಯೋಗ ಮತ್ತು ಶಿಕ್ಷಣದಲ್ಲಿ ಭದ್ರತೆ ಇಲ್ಲದ ಕಾರಣ ಪಾಲಕರು ಅನಿವಾರ್ಯವಾಗಿ ಮಕ್ಕಳನ್ನು ಬೇರೆ ಭಾಷಾ ಮಾಧ್ಯಮಗಳಿಗೆ ಸೇರಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಕಳೆದ ವರ್ಷವೊಂದರಲ್ಲೇ ಆದೋನಿಯಲ್ಲಿ ಮೂರು ಕನ್ನಡ ಶಾಲೆಗಳು ಮುಚ್ಚಲ್ಪಟ್ಟಿವೆ. ಇದು ಆಂಧ್ರದಲ್ಲಿ ಕನ್ನಡದ ಅಸ್ತಿತ್ವಕ್ಕೆ ಸಂಚಕಾರ ತಂದಿದೆ ಎಂದು ಪ್ರತಿಭಟನಕಾರರು ಅಕ್ರೋಶ ವ್ಯಕ್ತಪಡಿಸಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net