ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಜ.17ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಹಾಲಿ, ಮಾಜಿ ಶಾಸಕರು ಹಾಗೂ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.