ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿ, ಮಹಿಳೆಯರ ಸುರಕ್ಷತೆ - ಸಮಾಜದ ಜವಾಬ್ದಾರಿ. ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಕೌಟುಂಬಿಕ ಹಿಂಸೆ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಮಹಿಳಾ ಕಳ್ಳಸಾಗಣೆ ಸೇರಿದಂತೆ ಸಾಮಾಜಿಕ ಕೆಡುಕುಗಳನ್ನು ತಡೆಯಲು ಅಕ್ಕ ಪಡೆ ಒಂದು ಸಮುದಾಯ ಆಧಾರಿತ ರಕ್ಷಣಾ ಪಡೆಯಾಗಿದೆ ಎಂದರು.