ಒಲಿಸಿಕೊಳ್ಳುವ ಮಾರ್ಗ ಬಿಂಬಿಸಿದವರು

ಬಳ್ಳಾರಿಯಲ್ಲಿ ಆಯೋಜಿಸಿದ್ದ  ಶ್ರೀಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ  ಕೆ.ಇ.ಚಿದಾನಂದಪ್ಪ  ಉದ್ಘಾಟಿಸಿದರು. ಗಂಗಾಮತಸ್ಥರ ಸಂಘದ ಜಿಲ್ಲಾಧ್ಯಕ್ಷ ಬಿ.ಮೌಲಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ನಿ.ಆರ್‌ಟಿಒ ಅಧಿಕಾರಿ ಪಂಪಾಪತಿ, ನಿ.ಚಿತ್ರಕಲಾ ಶಿಕ್ಷಕ ಯು.ರಮೇಶ್, ನಿ. ಕೆಕೆಆರ್‌ಟಿಸಿ ಅಧಿಕಾರಿ ಹನುಮಂತಪ್ಪ, ಮುಖಂಡರಾದ ಗಣೇಶ್ ಬಾರಿಕಾರ, ರಂಗಸ್ವಾಮಿ, ಹುಲುಗಪ್ಪ, ಮೋಹನ್ ಇದ್ದರು. ===

Published on

ಪ್ರಮುಖ ಮುಖ್ಯಾಂಶಗಳು

  • ಸಹಯೋಗ
ಬಳ್ಳಾರಿ : ಅಂಬಿಗರ ಚೌಡಯ್ಯ ಅವರು ನಿರ್ಮಲ ಭಕ್ತಿ, ನಿಸ್ವಾರ್ಥ ಸೇವೆಯೇ ಭಗವಂತನನ್ನು ಒಲಿಸಿಕೊಳ್ಳುವ ಮಾರ್ಗ ಬಿಂಬಿಸಿದವರು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ನಿಜಶರಣ ಶ್ರೀಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನೇರ, ನಿಷ್ಠುರ, ತೀಕ್ಷ್ಣ ಬರಹಗಳ ಮೂಲಕ ವರ್ಣವ್ಯವಸ್ಥೆ, ಲಿಂಗ ತಾರತಮ್ಯ, ಅಸ್ಪಶ್ಯತೆ ಮುಂತಾದ ಸಾಮಾಜಿಕ ಅನಿಷ್ಟಗಳ ಬಗ್ಗೆ ನಿರಂತರ ಜಾಗೃತಿ ಮೂಡಿಸಿದವರು ನಿಜಶರಣ ಅಂಬಿಗರ ಚೌಡಯ್ಯನವರು ಎಂದು ಸ್ಮರಿಸಿದರು.
ನಿವೃತ್ತ ಶಿಕ್ಷಕ ಕೆ.ಬಿ. ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಅಂಬಿಗರ ಚೌಡಯ್ಯ ಅವರು ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಭಿನ್ನ. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭವಿಯಾಗಿದ್ದವರು. ಇವರು ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಕಾಣಬಹುದಾಗಿದೆ ಎಂದರು.
ಜಯಂತಿ ಅಂಗವಾಗಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಿತು. ನಾನಾ ಸಾಂಸ್ಕೃತಿಕ ಕಲಾತಂಡಗಳು ಬಹಗವಹಿಸಿ ಮೆರಗು ನೀಡಿದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net