ಜಿಲ್ಲೆಯಿಂದ ಸಾವಿರಾರು ಜನರು ಭಾಗಿ

ವೈ.ಎಂ.ಸತೀಶ್
ವೈ.ಎಂ.ಸತೀಶ್
Published on

ಪ್ರಮುಖ ಮುಖ್ಯಾಂಶಗಳು

  • ಮುಖಂಡ
ಬಳ್ಳಾರಿ : ಮೇ.9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬೃಹತ್ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 25ಸಾವಿರಕ್ಕೂ ಅಧಿಕ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ತೆರಳಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸ್ವಯಂ ಪ್ರೇರಿತರಾಗಿ 250ಕ್ಕೂ ಅಧಿಕ ವಾಹನಗಳಲ್ಲಿ ತೆರಳಲಿದ್ದಾರೆ. ಇದು ಯಾವುದೇ ರಾಜಕೀಯ ಲಾಭಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ, ಬದಲಾಗಿ ಬಿಎಸ್‌ವೈ ಅವರ ಮೇಲಿನ ಅಭಿಮಾನ ಮತ್ತು ಗೌರವದ ಸಂಕೇತವಾಗಿದೆ. ಪಕ್ಷದ ಹಿರಿಯ ನಾಯಕರ ಯಶಸ್ವಿ ಹಾದಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶ ಹೊಂದಿರುವ ಈ ಸಮಾವೇಶಕ್ಕೆ ಜಿಲ್ಲೆಯ ಎಲ್ಲ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಎಂದರು.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಯಡಿಯೂರಪ್ಪನವರ ಕೊಡುಗೆ ಅಪಾರವಾಗಿದೆ. ಅವರ ಅರ್ಧ ಶತಮಾನದ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ಮೋಕಾ, ಮುಖಂಡರಾದ ವಿರುಪಾಕ್ಷಿಗೌಡ, ಮುರಾರಿಗೌಡ, ಅಡವಿಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net