ವೃತ್ತಿ ನೈಪುಣ್ಯ ಗಳಿಸಲು ಮುಂದಾಗಿ

ಕಂಪ್ಲಿಯಲ್ಲಿ ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಭಾವಚಿತ್ರದ ಮೆರವಣಿಗೆ ನಡೆಯಿತು
ಕಂಪ್ಲಿಯಲ್ಲಿ ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಭಾವಚಿತ್ರದ ಮೆರವಣಿಗೆ ನಡೆಯಿತು
Published on
ಕಂಪ್ಲಿ: ಭೋವಿ ಸಮುದಾಯದವರು ಸಂಘಟಿತರಾಗುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಚಿತ್ರದುರ್ಗ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ಕಂಪ್ಲಿ ಮತ್ತು ಕುರುಗೋಡು ತಾಲೂಕು ಭೋವಿ (ವಡ್ಡರು) ಸಮಾಜ, ಶ್ರೀರಾಮಸೇವಾ ಸಮಿತಿಯಿಂದ ಆಯೋಜಿಸಿದ್ದ ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತ್ಯುತ್ಸವ, ಜನಜಾಗೃತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಬುಧವಾರ ಮಾತನಾಡಿದರು.
ಭೋವಿ ಸಮುದಾಯದವರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಉತ್ತಮ ಹುದ್ದೆ ಪಡೆಯುವಂತೆ ಪ್ರೇರೇಪಿಸಬೇಕು. ವರ್ತಮಾನಕ್ಕೆ ತಕ್ಕಂತೆ ವೃತ್ತಿ ನೈಪುಣ್ಯ ಗಳಿಸುವಲ್ಲಿ ಮುಂದಾಗಬೇಕು. ದುಶ್ಚಟಗಳಿಂದ ದೂರವಿದ್ದು, ವೈಯಕ್ತಿಕ ಮತ್ತು ಸಮುದಾಯಿಕ ಪ್ರಗತಿ ಸಾಧಿಸಬೇಕು ಎಂದರು.
ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ಶಾಸಕ ಜೆ.ಎನ್.ಗಣೇಶ್ ಚಾಲನೆ ನೀಡಿದರು. ವೀರಶೈವ ಲಿಂಗಾಯತ ಮಹಾವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್, ಬಿಜೆಪಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ, ಭೋವಿ ಸಮುದಾಯದ ಪ್ರಮುಖರಾದ ವಿ.ಟಿ.ರಾಜ, ಮಹೇಶ ಟೈಲ್ಸ್, ವಿಶ್ವನಾಥ, ವಿ.ಬಿ.ನಾಗರಾಜ, ಯಲ್ಲಪ್ಪ, ನಾಗೇಂದ್ರ, ರಂಗಪ್ಪ, ರಾಜು, ಸುರೇಶ, ಅರುಣಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net