ಕಾಣೆಯಾದ ಮಕ್ಕಳ ಶೀಘ್ರ ಪತ್ತೆ ಹಚ್ಚಿ

ಬಳ್ಳಾರಿಯ ಎಸ್ಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಎಸ್ಪಿ ಸುಮನ್ ಡಿ.ಪನ್ನೇಕರ್, ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಎಎಸ್ಪಿ ನವೀನ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷೆ ತ್ರಿವೇಣಿ ಪತ್ತಾರ್ ಇತರರಿದ್ದರು.
ಬಳ್ಳಾರಿಯ ಎಸ್ಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಎಸ್ಪಿ ಸುಮನ್ ಡಿ.ಪನ್ನೇಕರ್, ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಎಎಸ್ಪಿ ನವೀನ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷೆ ತ್ರಿವೇಣಿ ಪತ್ತಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಶೇಷ ಕಾರ್ಯಪಡೆ ರಚಿಸಿ
ಬಳ್ಳಾರಿ : ಜಿಲ್ಲೆಯಲ್ಲಿ ಅಪಹರಣಕ್ಕೊಳಗಾದ ಹಾಗೂ ಕಾಣೆಯಾದ ಮಕ್ಕಳನ್ನು ಶೀಘ್ರ ಪತ್ತೆಹಚ್ಚಬೇಕು ಎಂದು ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ಹೇಳಿದರು. ನಗರದ ಎಸ್ಪಿ ಕಚೇರಿಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದಿಂದ ಆಯೋಜಿಸಿದ್ದ ಅಪಹರಣಕ್ಕೊಳಗಾದ ಮತ್ತು ಕಾಣೆಯಾದ ಮಕ್ಕಳ ದೂರುಗಳ ಪರಿಶೀಲನಾ ಜಿಲ್ಲಾ ಮಟ್ಟದ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ ತಡೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ದಾಖಲಾಗಿರುವ ಕಾಣೆಯಾದ ಮತ್ತು ಅಪಹರಣಕ್ಕೊಳಗಾದ ಮಕ್ಕಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವರನ್ನು ಪತ್ತೆಹಚ್ಚಲು ವಿಶೇಷ ಕಾರ್ಯಪಡೆ ರಚಿಸಿ ತೀವ್ರ ಕ್ರಮ ಕೈಗೊಳ್ಳಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ದಾಖಲಿಸಲು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸುವುದು ಹಾಗೂ ಬೀದಿಗಳಲ್ಲಿ ಮಕ್ಕಳ ಭಿಕ್ಷಾಟನೆಗೆ ಸಂಪೂರ್ಣ ಕಡಿವಾಣ ಹಾಕಿ, ಅಂತಹ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಬಾಲ್ಯವಿವಾಹ ತಡೆಗಟ್ಟಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಮತ್ತು ಬಾಲ್ಯವಿವಾಹ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ರಚಿಸಲಾಗಿರುವ ಅಕ್ಕ ಪಡೆಯು ವಸತಿ ನಿಲಯಗಳು ಹಾಗೂ ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು ಎಂದು ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net