ಜಿಲ್ಲೆಯಲ್ಲಿ ವೈಕುಂಠ ಏಕದಶಿ ಆಚರಣೆ

ಬಳ್ಳಾರಿಯ ಶ್ರೀವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆ ದೇವರ ಮೂರ್ತಿಯನ್ನು ಅಲಂಕಾರಿಸಲಾಗಿತ್ತು.
ಬಳ್ಳಾರಿಯ ಶ್ರೀವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆ ದೇವರ ಮೂರ್ತಿಯನ್ನು ಅಲಂಕಾರಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ವೈಕುಂಠ
  • ಏಕದಶಿ
  • ಅಲಂಕೃತ
ಬಳ್ಳಾರಿ : ನಗರದ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ವೈಕುಂಠ ಏಕದಶಿಯನ್ನು ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು.
ಬೆಳಗ್ಗೆೆಯಿಂದಲೇ ವಿಷ್ಣು ದೇವಾಲಯಗಳಲ್ಲಿ ಭಕ್ತರ ಜಮಾಯಿಸಿದ್ದರು, ‘ಗೋವಿಂದ... ಗೋವಿಂದ...’ ಎಂಬ ನಾಮಸ್ಮರಣೆ ಮೊಳಗಿತು. ಕೂಲ್ ಕಾರ್ನರ್ ಬಳಿಯ ವೆಂಕಟೇಶ್ವರ ದೇವಾಲಯ, ರಾಮೇಶ್ವರ ದೇವಾಲಯ, ಪಟೇಲ್ ನಗರದಲ್ಲಿನ ವೆಂಕಟೇಶ್ವರ ದೇವಸ್ಥಾನ, ಸಿರಗುಪ್ಪ ರಸ್ತೆಯಲ್ಲಿನ ಶ್ರೀಯಂತ್ರೋದ್ದಾರಕ ದೇವಸ್ಥಾನ, ಹೊಸಪೇಟೆ ರಸ್ತೆಯ ನಾಗಲಕೆರೆಯ ಶ್ರೀವೆಂಕಟೇಶ್ವರ ದೇವಸ್ಥಾನ, ಡಾ.ರಾಜಕುಮಾರ್ ಪಾರ್ಕ್ ಹತ್ತಿರದ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನ, ಬಾಲಾಜಿ ಕ್ಯಾಂಪ್‌ನ ಅಮೃತೇಶ್ವರ ದೇವಸ್ಥಾನ ಸೇರಿದಂತೆ ನಾನಾ ಕಡೆಗಳಲ್ಲಿ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಧಾರ್ಮಿಕ ಕೈಂಕರ್ಯಗಳು ನಡೆದವು.
ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದ ವೈಕುಂಠ ದ್ವಾರ ಮೂಲಕ ಸಾಗಿದ ಭಕ್ತರು ಸಾಗಿ ದರ್ಶನ ಪಡೆದು ಪುನೀತರಾದರು. ದೇಗುಲಗಳಲ್ಲಿ ನೈವೇದ್ಯ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ದೇವರ ದರ್ಶನ ಪಡೆಯಲು ಅಪಾರ ಸಂಖ್ಯೆಯ ಭಕ್ತರು ಚಳಿಯನ್ನೂ ಲೆಕ್ಕಿಸದೆ ಸರತಿಯಲ್ಲಿ ನಿಂತಿದ್ದು ಕಂಡು ಬಂತು.
ಬಹುತೇಕ ದೇವಾಲಯಗಳಲ್ಲಿ ಸ್ವಾಮಿಗೆ ತುಳಸಿ ಅರ್ಚನೆ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ದೇವಸ್ಥಾನಗಳಲ್ಲಿ ಭಾರಿ ಜನಜಂಗುಳಿ ಇದ್ದಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ಕುಡಿವ ನೀರು ಹಾಗೂ ನೆರಳಿನ ವ್ಯವಸ್ಥೆಯನ್ನು ದೇವಸ್ಥಾನದ ಸಮಿತಿಗಳು ಮಾಡಿದ್ದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net