ಬಿಜೆಪಿಯಿಂದ ವಿಜಯೋತ್ಸವ

ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಪಶ್ಚಿಮ ಬಂಗಾಳ ಹಾಗೂ ಆಸ್ಸಾಂನಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಜಿಲ್ಲಾ ಬಿಜೆಪಿ ಘಟಕದಿಂದ ಸಂಭ್ರಮಚಾರಣೆ ನಡೆಯಿತು. ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ ಕುಮಾರ್ ಮೋಕಾ, ಮುಖಂಡರಾದ ಸುರೇಖಾ, ಡಾ.ಅರುಣಾ, ಪುಷ್ಪಾಲತಾ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ವಿಜಯೋತ್ಸವ
ಬಳ್ಳಾರಿ : ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.
ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗುತ್ತಾ ವಿಜಯೋತ್ಸವ ಆಚರಿಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತಾ ಷಾ ಸೇರಿದಂತೆ ನಾನಾ ನಾಯಕರ ಘೋಷಣೆ ಕೂಗಿದರು. ತಮಟೆ ಸೌಂಡ್ ಹಾಗೂ ವಾದ್ಯಗೋಷ್ಠಿಗಳ ಅಬ್ಬರಕ್ಕೆ ಕಾರ್ಯಕರ್ತರು ಹೆಜ್ಜೆ ಹಾಕುತ್ತಾ ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸುವ ಮೂಲಕ ಸಂಭ್ರಮ ಹಂಚಿಕೊಂಡ ಕಾರ್ಯಕರ್ತರು, ಸಾರ್ವಜನಿಕರಿಗೂ ಸಿಹಿ ವಿತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net