ವಿವೇಕ ಖರೀದಿಸಲು ಸಾಧ್ಯವಿಲ್ಲ

ಬಳ್ಳಾರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಆಯೋಜಿಸಿದ್ದ  ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು  ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಉದ್ಘಾಟಿಸಿದರು. ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ನೆಲ್ಕುದ್ರಿ ಸದಾನಂದ, ವಾಗ್ಮಿ ಹರಿಕ ಮಂಜುನಾಥ್, ಪದಾಧಿಕಾರಿಗಳಾದ ಗವಿಯಪ್ಪ, ರವಿಬಾಬು, ಗಂಗಾಧರ್, ದೊಡ್ಡಬಸವನಗೌಡ ಇತರರಿದ್ದರು. ===

Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿಕೆ
ಬಳ್ಳಾರಿ : ಹಣದಿಂದ ಎಲ್ಲವನ್ನೂ ಖರೀದಿಸಲು ಸಾಧ್ಯವಾದರೂ ವಿವೇಕ ಮತ್ತು ಸಂಸ್ಕಾರ ಖರೀದಿಸಲು ಸಾಧ್ಯವಿಲ್ಲ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಆಯೋಜಿಸಿದ್ದ 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಆದ್ದರಿಂದ, ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಜೀವನ ಮೌಲ್ಯ ಬೆಳೆಸುವ ಮಾರ್ಗದರ್ಶನ ನೀಡಬೇಕು ಎಂದರು.
ವಿದ್ಯಾರ್ಥಿಗಳು ಕೇವಲ ಅಂಕಗಳ ಹಿಂದೆ ಓಡುವುದಷ್ಟೇ ಸಾಕಾಗುವುದಿಲ್ಲ. ಜ್ಞಾನದೊಂದಿಗೆ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಂಡಾಗ ಮಾತ್ರ ಅವರು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ ಎಂದರು. ಜಿಲ್ಲೆಯ ಸರ್ಕಾರಿ ನೌಕರರು ತಮ್ಮ ಕರ್ತವ್ಯವನ್ನು ದಕ್ಷತೆಯಿಂದ ನಿರ್ವಹಿಸುತ್ತಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಯಾಗಿ ನಡೆದಿರುವುದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ನಾನಾ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ನೌಕರರ ಮೇಲಿದೆ ಎಂದರು.
ಖ್ಯಾತ ವಾಗ್ಮಿ ಹರಿಕ ಮಂಜುನಾಥ್ ಮಾತನಾಡಿ, ಭಾರತೀಯ ಸಂಸ್ಕೃತಿ, ವೇದ-ಉಪನಿಷತ್ತುಗಳ ಜ್ಞಾನ ಪರಂಪರೆ ಇಡೀ ವಿಶ್ವಕ್ಕೆ ದಾರಿದೀಪವಾಗಿದೆ. ನಮ್ಮಲ್ಲಿರುವ ಅಪಾರ ಸಾಮರ್ಥ್ಯ ಪ್ರತಿಯೊಬ್ಬ ಭಾರತೀಯನು ಅರಿತುಕೊಂಡಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ 350 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ ಎರಡು ಸಾವಿರ ರೂ. ನಗದು, ಶಾಲು, ಬ್ಯಾಗ್ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net