ಹೂವಿನಹಡಗಲಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷೆ ಜಮೀಲಾಬಿ ಉದ್ಘಾಟಿಸಿದರು. ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಮಂಜುನಾಥ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶಂಭುನಾಥ್ ಕಣವಿ, ಸುಭಾಸ್ ವರಕನಹಳ್ಳಿ ಇತರರಿದ್ದರು.
ಹೂವಿನಹಡಗಲಿ: ಮಹಿಳೆಯುರು ಸಮಾಜಮುಖಿಯಾಗಿ ಬದುಕಲು ಶಿಕ್ಷಣ ಹಾಗೂ ಆರ್ಥಿಕ ಸಬಲತೆ ಅವಶ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.
ಪಟ್ಟಣದ ಸೇವಾಲಾಲ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಭಾನುವಾರ ಆಯೋಜಿಸಿದ್ದ ತಾಲೂಕಾ ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣ ಭಾಗದ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನಮ್ಮ ಸಂಸ್ಥೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಜ್ಞಾನದ ಜತೆಗೆ ಆರ್ಥಿಕವಾಗಿ ಅಭಿವೃದ್ಧಿಯಾಗಬೇಕಿದೆ ಎಂದರು.
ಸಂಪನೂಲ ವ್ಯಕ್ತಿ ಪಾರ್ವತಿ ತಳವಾರ ಮಾತನಾಡಿ, ಮಹಿಳೆಯರು ಅನೇಕ ರಂಗಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಕುಟುಂಬ ನಿರ್ವಹಣೆ ಜತೆಗೆ ಸಾಮಾಜಿಕ ಸವಾಲುಗಳನ್ನು ಸ್ವೀಕರಿಸಿ ಬದುಕು ಕಟ್ಟಿಕೊಂಡವರು ನಮಗೆ ಸ್ಫೂರ್ತಿಯಾಗಬೇಕು ಎಂದರು.
ಪುರಸಭೆ ಮಾಜಿ ಅಧ್ಯಕ್ಷೆ ಜಮೀಲಾಬಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶಂಭುನಾಥ್ ಕಣವಿ, ಸುಭಾಸ್ ವರಕನಹಳ್ಳಿ, ಶಂಭುನಾಥ, ಅಶೋಕ ಎಸ್.ಎಂ., ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಆರತಿ, ಕಾರ್ಯಕ್ರಮದ ಮೇಲ್ವಿಚಾರಕರಾದ ಶಾಂತಾ, ಶಶಿಕುಮಾರ್, ಯೋಜನಾಧಿಕಾರಿ ಮಂಜುನಾಥ ಇತರರಿದ್ದರು.