ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ವಿಎಸ್‌ಕೆ ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಉದ್ಘಾಟಿಸಿದರು. ವಿವಿ ಹಣಕಾಸು ಅಧಿಕಾರಿ ಕೆ.ಜಿ.ಸ್ಪೂರ್ತಿ, ಎಸ್‌ಕೆ ವಿವಿ ಸಿಂಡಿಕೇಟ್ ಸದಸ್ಯೆ ಜೆ. ಜಯಲಕ್ಷ್ಮೀ, ಸಂಯೋಜಕಿ ಶ್ರೀದೇವಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕೊಡುಗೆ
ಬಳ್ಳಾರಿ : ಮನೆಗೆ ಬೆಳಕಾಗುವ ಹೆಣ್ಣು, ದೇಶದ ಅಭಿವೃದ್ಧಿಗೂ ಅಷ್ಟೇ ಪ್ರಮುಖ ಕೊಡುಗೆ ನೀಡುತ್ತಿದ್ದಾಳೆ ಎಂದು ವಿಎಸ್‌ಕೆ ವಿವಿ ಸಿಂಡಿಕೇಟ್ ಸದಸ್ಯೆ ಜೆ. ಜಯಲಕ್ಷ್ಮೀ ಹೇಳಿದರು.
ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆಗೆ ಇಂದು ಬೇಕಿರುವುದು ಕೇವಲ ಮೆಚ್ಚುಗೆಯಲ್ಲ, ಬದಲಾಗಿ ಸಮಾನ ಹಕ್ಕು ಮತ್ತು ಅವಕಾಶ. ಅದೇರೀತಿಯಾಗಿ ಶೋಷಿತ ಮಹಿಳೆಯರಿಗೆ ನ್ಯಾಯ ಒದಗಿಸಲು ಎಲ್ಲ ಮಹಿಳೆಯರು ಮುಂದಾಗಬೇಕು ಎಂದರು.
ಇತಿಹಾಸದುದ್ದಕ್ಕೂ ಮಹಿಳೆಯರು ತಮ್ಮ ಅಪ್ರತಿಮ ದೃಢಸಂಕಲ್ಪ, ತ್ಯಾಗ ಮತ್ತು ಶಕ್ತಿಯ ಮೂಲಕ ಸಮಾಜ ರೂಪಿಸುತ್ತಾ ಬಂದಿದ್ದಾರೆ. ಶಿಕ್ಷಣ, ವ್ಯಾಪಾರ, ವಿಜ್ಞಾನ, ಕಲೆ, ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ, ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ವಿಎಸ್‌ಕೆ ವಿವಿ ಕುಲಪತಿ ಪ್ರೊ.ಎಂ. ಮುನಿರಾಜು ಮಾತನಾಡಿ, ಲಿಂಗ ಸಮಾನತೆಗಾಗಿ ಪ್ರತಿಪಾದಿಸುವುದರ ಜತೆಗೆ ಮಹಿಳೆಯರು ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯವಾಗಿ ಸದೃಢವಾಗಬೇಕಾಗಿದೆ ಎಂದು ಕರೆ ನೀಡಿದರು.
ಪ್ರಸ್ತುತದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ವಿವಿಯಲ್ಲಿ ವಿದ್ಯಾರ್ಥಿನಿಯರಿಗೆ ಕೌಶಲಧಾರಿತ ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜತೆಯಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.