ಸಿರಿಗೇರಿ: ನಿಮ್ಮ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ನೀಡದೆ ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಗ್ರಾಪಂ ಸಿಬ್ಬಂದಿಗೆ ಆಡಳಿತಾಧಿಕಾರಿ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಎ.ಕೆ.ಜಲಾಲಪ್ಪ ತಾಕೀತು ಮಾಡಿದರು.
ಗ್ರಾಪಂ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಪಿಡಿಒ ಹುಸೇನ್ ಪೀರ ಸಾಬ್, ಕಾರ್ಯದರ್ಶಿ ಸಿದ್ದರಾಮ ಇತರರಿದ್ದರು.