ಹಿಂದುಳಿದ ಮಕ್ಕಳ ಸುಧಾರಣೆಗೆ ಶ್ರಮಿಸಿ

ಹೂವಿನಹಡಗಲಿಯ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ತಾಲೂಕಿನ ಮುಖ್ಯಶಿಕ್ಷಕರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ ಮಾತನಾಡಿದರು. ಬಿಇಒ ಮಹೇಶ ಪೂಜಾರ, ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ.ಎಂ.ಕಾಂತೇಶ್, ಜಿಲ್ಲಾ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಹುಲಿಬಂಡಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪ್ರಗತಿ ಪರಿಶೀಲನಾ ಸಭೆ
  • ಎಸ್ಸೆಸ್ಸೆಲ್ಸಿ ಫಲಿತಾಂಶ
  • ಶೈಕ್ಷಣಿಕ ಪ್ರಗತಿ

ಹಿಂದುಳಿದ ಮಕ್ಕಳ ಸುಧಾರಣೆಗೆ ಶ್ರಮಿಸಿ

ಹೂವಿನಹಡಗಲಿ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ತಾಲೂಕು ಪ್ರಥಮ ಸ್ಥಾನ ಪಡೆಯುವಂತೆ ಮುಖ್ಯಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ ಹೇಳಿದರು.
ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ತಾಲೂಕಿನ ಮುಖ್ಯಶಿಕ್ಷಕರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಶಾಲೆಯಲ್ಲಿ ಹಿಂದುಳಿದ ಮಕ್ಕಳ ಸುಧಾರಣೆಗೆ ಎಲ್ಲ ಶಿಕ್ಷಕರು ಶ್ರಮಿಸಬೇಕು. ಕಳೆದ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಲೂಕು ಪ್ರಥಮ ಸ್ಥಾನ ಗಳಿಸಿದೆ. ಈ ವರ್ಷವೂ ಹೆಚ್ಚು ಸಾಧನೆ ಆಗಬೇಕು. ಪೂರ್ಣ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ವಿಶೇಷ ಪುನರಾವರ್ತನೆ ತರಗತಿ ನಡೆಸಬೇಕು. ಫಲಿತಾಂಶ ಕಡಿಮೆಯಾದ ಶಾಲೆಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಇಒ ಮಹೇಶ ಪೂಜಾರ, ಜಿಲ್ಲಾ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಹುಲಿಬಂಡಿ, ಕನ್ನಡ ವಿಷಯ ಪರಿವೀಕ್ಷಕ ರಾಜಶೇಖರ್, ವಿಜ್ಞಾನ ವಿಷಯ ಪರಿವೀಕ್ಷಕ ಬಸವಂತಯ್ಯ, ತಾಲೂಕು ಪ್ರೌಢಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷ ಜಿ.ಎಂ.ಕಾಂತೇಶ್, ಉಪಪ್ರಾಚಾರ್ಯ ಬಿ.ರವೀಂದ್ರನಾಥ, ಶಿಕ್ಷಣ ಸಂಯೋಜಕ ಹಣ್ಣಿ ನರೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net