ಸಂಡೂರು ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮ ನಿಮಿತ್ತ ತಹಸೀಲ್ದಾರ್ ಅನಿಲ್ ಕುಮಾರ್ ಭಿತ್ತಿ ಪತ್ರಗಳನ್ನು ಬಿಡುಗಡೆ ಗೊಳಿಸಿದರು. ಟಿಎಚ್‌ಒ ಡಾ.ವೀರೇಂದ್ರ ಕುಮಾರ್, ತಾಪಂ ವ್ಯವಸ್ಥಾಪಕ ಬಿ.ವಿ.ರಮೇಶ, ಡಾ.ಕಿರಣ್ ಕುಮಾರ್, ಸಮುದಾಯ ಅಭಿವೃದ್ಧಿ ಅಧಿಕಾರಿ ಎಚ್.ಪ್ರಭುರಾಜ ಮತ್ತಿತರರಿದ್ದರು.
ಸಂಡೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ನಿಮಿತ್ತ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಂಗಳವಾರ ನಡೆಯಿತು.
ತಹಸೀಲ್ದಾರ್ ಅನಿಲ್ ಕುಮಾರ್ ಮಾತನಾಡಿ, ತಾಲೂಕು ಮಟ್ಟದ ಅಧಿಕಾರಿಗಳು ಪಲ್ಸ್ ಪೋಲಿಯೋ ಸಂದರ್ಭದಲ್ಲಿ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ಟಿಎಚ್‌ಒ ಡಾ.ವಿರೇಂದ್ರ ಕುಮಾರ್ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡಿ ಪೋಲಿಯೋ ಕಾರ್ಯಕ್ರಮದ ಉದ್ದೇಶ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವ ಕುರಿತು ಮಾತನಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಜೂ.28ರಿಂದ ಜು.1ರವರೆಗೆ ತಾಲೂಕಿನ ಎಲ್ಲ ಗ್ರಾಮಗಳು ಸೇರಿ ಒಟ್ಟು 203ಬೂತ್‌ಗಳು ಹಾಗೂ ತುರ್ತು ಕೆಲಸದ ನಿಮಿತ್ತ ಊರುಗಳಿಗೆ ತೆರಳುವ ಕುಟುಂಬದ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸಂಡೂರು ಪಟ್ಟಣದ ಬಸ್ ನಿಲ್ದಾಣ, ತೋರಣಗಲ್ಲು ರೈಲ್ವೆ ಸ್ಟೇಷನ್ ಹತ್ತಿರ ಹಾಗೂ ಚೋರನೂರು ಬಸ್ ನಿಲ್ದಾಣದಲ್ಲಿ ಪೋಲಿಯೋ ಬೂತ್‌ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. 35,818 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.