ಕಾರ್ಮಿಕ ಕುಟುಂಬಗಳು ಬೀದಿಗೆ

ಸಂಡೂರು ತಾಲೂಕಿನ ಎನ್‌ಎಂಡಿಸಿ ಪೆಲೆಟ್ ಪ್ಲಾಂಟ್ ಎದುರು ಎಐಯುಟಿಯುಸಿ ಸಂಯೋಜಿತ ಸಂಯುಕ್ತ ಗಣಿ ಕಾರ್ಮಿಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಸಂಯುಕ್ತ ಗಣಿ ಕಾರ್ಮಿಕ ಸಂಘದ ಕಾರ್ಯಾಧ್ಯಕ್ಷ ಎ.ದೇವದಾಸ್, ಅಧ್ಯಕ್ಷ ಕೆ.ಸೋಮಶೇಖರ್, ಕಾರ್ಯದರ್ಶಿ ಡಾ.ಪ್ರಮೋದ್ ಇತರರಿದ್ದರು.
ಸಂಡೂರು ತಾಲೂಕಿನ ಎನ್‌ಎಂಡಿಸಿ ಪೆಲೆಟ್ ಪ್ಲಾಂಟ್ ಎದುರು ಎಐಯುಟಿಯುಸಿ ಸಂಯೋಜಿತ ಸಂಯುಕ್ತ ಗಣಿ ಕಾರ್ಮಿಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಸಂಯುಕ್ತ ಗಣಿ ಕಾರ್ಮಿಕ ಸಂಘದ ಕಾರ್ಯಾಧ್ಯಕ್ಷ ಎ.ದೇವದಾಸ್, ಅಧ್ಯಕ್ಷ ಕೆ.ಸೋಮಶೇಖರ್, ಕಾರ್ಯದರ್ಶಿ ಡಾ.ಪ್ರಮೋದ್ ಇತರರಿದ್ದರು.
Published on
ಸಂಡೂರು: ಗುತ್ತಿಗೆದಾರರ ಟೆಂಡರ್ ಅವಧಿ ನ.18ಕ್ಕೆ ಮುಗಿದ ಹಿನ್ನೆಲೆಯಲ್ಲಿ ಎನ್.ಎಂ.ಡಿ.ಸಿ ಪೆಲೆಟ್ ಪ್ಲಾಂಟ್ ಹಾಗೂ ಬೆನಿಫಿಕೇಷನ್ ಪ್ಲಾಂಟ್‌ನ 500 ಜನರ ಗುತ್ತಿಗೆ ಕಾರ್ಮಿಕರ ಕೆಲಸವನ್ನು ಕೊನೆಗೊಳಿಸಲಾಗಿದೆ ಎಂದು ಸಂಯುಕ್ತ ಗಣಿ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಆರೋಪಿಸಿದರು.
ಎನ್‌ಎಂಡಿಸಿ ಆಡಳಿತ ಕಚೇರಿ ಮುಂದೆ ಸಂಯುಕ್ತ ಗಣಿ ಕಾರ್ಮಿಕ ಸಂಘದಿಂದ (ಎಐಯುಟಿಯುಸಿ) ನಡೆದ ಪ್ರತಿಭಟನೆಯಲ್ಲಿ ಸೋಮವಾರ ಮಾತನಾಡಿದರು. ಎನ್‌ಎಂಡಿಸಿ ಕಾರ್ಮಿಕರ ಸೇವಾ ಭದ್ರತೆ ಖಾತ್ರಿಪಡಿಸದೆ, ಮುಂದಿನ ಗುತ್ತಿಗೆದಾರರು ಬರುವವರೆಗೆ ಕಾಯಬೇಕು ಎಂದು ಹೇಳುತ್ತಿದೆ. ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರಿಸುವ ಭರವಸೆ ನೀಡುತ್ತಿಲ್ಲ. ಇದರಿಂದ ನೂರಾರು ಕಾರ್ಮಿಕರು ಮತ್ತವರ ಕುಟುಂಬಗಳು ಬೀದಿಗೆ ಬಂದಿವೆ ಎಂದು ದೂರಿದರು.
ಹೊಸ ಗುತ್ತಿಗೆದಾರರು ಕೂಡಲೇ ಕಾಮಗಾರಿ ಆರಂಭಿಸಿ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎನ್‌ಎಂಡಿಸಿ ಕ್ರಮ ಕೈಗೊಳ್ಳಬೇಕು. ಅಲ್ಲಿವರೆಗೂ ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ, ಪಿಎಫ್ ಇನ್ನಿತರ ಕಾನೂನಾತ್ಮಕ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ಎನ್‌ಎಂಡಿಸಿ ಕಾರ್ಯಕಾರಿ ನಿರ್ದೇಶಕ ಎಸ್.ಪಿ. ಸಿಂಗ್, ಪೆಲೆಟ್ ಪ್ಲಾಂಟ್‌ನ ಪ್ರಾಜೆಕ್ಟ್ ಮ್ಯಾನೇಜರ್ ಡಿ.ಜಿ.ವೆಂಕಟರಾವ್ ಅವರಿಗೆ ಮನವಿ ನೀಡಲಾಯಿತು. ನ.28ರಂದು ಹೊಸ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಎನ್‌ಎಂಡಿಸಿ ಅಧಿಕಾರಿಗಳು ಭರವಸೆ ನೀಡಿದರು.
ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಮೇಟಿ, ಸಂಯುಕ್ತ ಗಣಿ ಕಾರ್ಮಿಕ ಸಂಘದ ಕಾರ್ಯಾಧ್ಯಕ್ಷ ಎ.ದೇವದಾಸ್, ಕಾರ್ಯದರ್ಶಿ ಡಾ.ಪ್ರಮೋದ್, ಪ್ರಮುಖರಾದ ಸುರೇಶ್, ಹುಲಿಗೇಶ್, ಮಂಜುನಾಥ್, ಸಂತೋಷ್, ನಾಗೇಶ್, ರಾಜಪ್ಪ, ಯರ‌್ರಿಸ್ವಾಮಿ ಮುಂತಾದವರು ಇದ್ದರು. ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ತಹಸೀಲ್ದಾರ್‌ಗೂ ಸಲ್ಲಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net