ಆರೋಗ್ಯ ಸಮಸ್ಯೆಗಳಿಗೆ ಯೋಗ ಉತ್ತಮ

ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ನಡಿಗೆ ಜಾಥಾಕ್ಕೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ.ಫಣೇಂದರ್ ಚಾಲನೆ ನೀಡಿದರು. ಇಲಾಖೆಯ ಅಧಿಕಾರಿಗಳಾದ ಬಿ. ಬಸವರಾಜ್, ಕೆ. ಗುರುರಾಜ್, ಎಲ್. ರಾಜೇಶ್, ವಿ.ಬ್ರಹ್ಮಕುಮಾರ್, ಕೆ.ವಿಜಯಕುಮಾರ್ ಇತರರಿದ್ದರು.
ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ನಡಿಗೆ ಜಾಥಾಕ್ಕೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ.ಫಣೇಂದರ್ ಚಾಲನೆ ನೀಡಿದರು. ಇಲಾಖೆಯ ಅಧಿಕಾರಿಗಳಾದ ಬಿ. ಬಸವರಾಜ್, ಕೆ. ಗುರುರಾಜ್, ಎಲ್. ರಾಜೇಶ್, ವಿ.ಬ್ರಹ್ಮಕುಮಾರ್, ಕೆ.ವಿಜಯಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯೋಗ ಅತ್ಯುತ್ತಮ ಮಾರ್ಗ
  • ಅನೇಕ ಆರೋಗ್ಯಕರ ಪ್ರಯೋಜನ
ಬಳ್ಳಾರಿ : ಆಧುನಿಕ ಜೀವನಶೈಲಿಯಲ್ಲಿ ಎದುರಾಗುವ ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳಿಗೆ ಯೋಗ ಅತ್ಯುತ್ತಮ ಔಷಧವಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ.ಫಣೇಂದರ್ ಹೇಳಿದರು.
ನಗರದ ನೂತನ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಆಯೋಜಿಸಿದ್ದ ಬೃಹತ್ ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರನ್ನು ಪ್ರೇರೇಪಿಸಲು ಈ ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು. ಯೋಗದಿಂದ ದೇಹಕ್ಕೆ ಮತ್ತು ಮನಸ್ಸಿಗೆ ಅನೇಕ ಆರೋಗ್ಯಕರ ಪ್ರಯೋಜನಗಳಿವೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡದ ದಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ ಅತ್ಯುತ್ತಮ ಮಾರ್ಗವಾಗಿದೆ. ಆರೋಗ್ಯಕರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಜೂ.21 ರಂದು ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭಗೊಂಡು ಸಂಗಮ್ ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊಂಡಿತು. ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗ ಪಟುಗಳು, ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಆರೋಗ್ಯವೇ ಭಾಗ್ಯ, ದಿನವೂ ಮಾಡಿ ಯೋಗ, ದೂರವಿಡಿ ರೋಗ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆಯಲಾಯಿತು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net