ನಗರದ ಬಿಬಿಸಿ ಕಾಲೇಜಿನಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಕನ್ನಡ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ಸ್ನಾತಕ ಪದವಿಯ ನಾಲ್ಕನೇ ಸೆಮಿಸ್ಟರ್‌ನ ಕಲಾ ಸೌರಭ-3, ವಾಣಿಜ್ಯ ಸೌರಭ-3, ವಿಜ್ಞಾನ ಸೌರಭ-3 ಕನ್ನಡ ಭಾಷಾ ಪಠ್ಯಪುಸ್ತಕಗಳ ಲೋಕಾರ್ಪಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಈ ಮೂಲಕ ವಿದ್ಯಾರ್ಥಿಗಳ ದೈನಂದಿನ ಜೀವನದ ಭಾಗಗಳಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾಲಯವು ಮಹತ್ವದ ಕಾರ್ಯ ಮಾಡುತ್ತಿದೆ. ಪಠ್ಯಪುಸ್ತಕಗಳು ವೈವಿಧ್ಯಮಯ ಜೀವನದ ಅನುಭವಗಳ ಜತೆಗೆ ವಿವಿಧ ಜ್ಞಾನಶಿಸ್ತುಗಳ ಕೈಪಿಡಿಗಳಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಉದ್ದೇಶಗಳನ್ನು ಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದರು.